ಭಾರತದ ವಿರುದ್ಧ ಆಸೀಸ್ ಗೆ 4 ರನ್ ಗಳ ರೋಚಕ ಗೆಲುವು

ಬ್ರಿಸ್ಬೇನ್: ಗಬ್ಬಾ ಕ್ರಿಕೆಟ್ ಮೈದಾನದಲ್ಲಿ ನಡೆದ ಮಳೆ ಬಾಧಿತ ಮೊದಲ ಟ್ವೆಂಟಿ-20 ಪಂದ್ಯದಲ್ಲಿ ಭಾರತ ವಿರುದ್ಧ ಆತಿಥೇಯ ಆಸ್ಟ್ರೇಲಿಯಾ ತಂಡವು ಡಕ್ವರ್ತ್ ಲೂವಿಸ್ ನಿಯಮದಡಿಯಲ್ಲಿ 4 ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ.

ಇದರೊಂದಿಗೆ ಮೂರು ಪಂದ್ಯಗಳ ಟ್ವೆಂಟಿ-20 ಸರಣಿಯಲ್ಲಿ 1-0 ಅಂತರದ ಮುನ್ನಡೆ ದಾಖಲಿಸಿದೆ. ಮಳೆ ಬಾಧಿತ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ 17 ಓವರ್ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 158 ರನ್ ಪೇರಿಸಿತ್ತು. ಇದರಂತೆ ಡಕ್ವರ್ತ್ ಲೂವಿಸ್ ನಿಮಯದಂತೆ ಟೀಮ್ ಇಂಡಿಯಾ ಗೆಲುವಿಗಾಗಿ 174 ರನ್ ನಿಗದಿಪಡಿಸಲಾಗಿತ್ತು.

174 ರನ್ ಗಳ ಬೃಹತ್ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ, ಶಿಖರ್ ಧವನ್ (76) ಬಿರುಸಿನ ಅರ್ಧಶತಕದ ಹೊರತಾಗಿಯೂ 17 ಓರವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 169 ರನ್ ಗಳಿಸುವ ಮೂಲಕ ಸೋಲು ಒಪ್ಪಿಕೊಂಡಿತು. ಆಸ್ಟ್ರೇಲಿಯಾ ಪರ ಜಂಪಾ ಮತ್ತು ಸ್ಟೋನೀಸ್ ತಲಾ ಎರಡೆರಡು ವಿಕೆಟ್ ಪಡೆದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ