ಜಮ್ಮು ಮತ್ತು ಕಾಶ್ಮೀರ; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ: ಓರ್ವ ನಾಗರಿಕನಿಗೆ ಗಾಯ

ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಮುಂದುವರೆದಿದೆ. ಇಲ್ಲಿನ ಕುಲ್ಗಾಂ ಜಿಲ್ಲೆಯ ಸೇನಾಶಿಬಿರದ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಓರ್ವ ನಾಗರೀಕನಿಗೆ ಗಂಭೀರ ಗಾಯಗಳಾಗಿವೆ.

ಕುಲ್ಗಾಮ್ ಜಿಲ್ಲೆಯ ಖುದ್ವಾನಿ ಪ್ರದೇಶದಲ್ಲಿರುವ ಸೇನಾ ಶಿಬಿರದ ಬಳಿ ಬಂದಿರುವ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಕೂಡಲೇ ಉಗ್ರರ ವಿರುದ್ಧ ಸೇನಾಪಡೆಗಳು ಕಾರ್ಯಾಚರಣೆಗಿಳಿದಿವೆ. ಪ್ರಸ್ತುತ ಸ್ಥಳದಲ್ಲಿ ಉಗ್ರರು ಹಾಗೂ ಭದ್ರತಾಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ.

ಗಾಯಾಳು ನಾಗರೀಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Jammu and Kashmir, Terrorists attack, Army camp in Kulgam

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ