ನಾಳೆಯಿಂದ ಡಿ.2ರವರೆಗೆ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಕಲಾಕೃತಿಗಳು ಮತ್ತು ಕಲಾಪ್ರಕಾರಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಬೆಂಗಳೂರು, ನ.22- ಭಾರತ ದೇಶದ ಮೂಲೆ ಮೂಲೆಗಳಲ್ಲೂ ಅತ್ಯಂತ ಹೆಮ್ಮೆಯ ಕರಕುಶಲ ಕಲಾವಿದರಿದ್ದಾರೆ.ಅವರ ಬಹುತೇಕ ಕಲಾಕೃತಿಗಳು ಹಾಗೂ ಕಲಾಪ್ರಕಾರಗಳು ಮರೆಯಾಗುವ ಆತಂಕವನ್ನು ಎದುರಿಸುತ್ತಿವೆ.ಇಂತಹ ಪ್ರಾಚೀನ ಹಾಗೂ ಭಾರತ ದೇಶದ ಸಾಂಸ್ಕøತಿಕ ಭವ್ಯತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ನಾಳೆಯಿಂದ ಡಿಸೆಂಬರ್ 2ರವರೆಗೆ ನಗರದ ಕರ್ನಾಟಕ ಚಿತ್ತಕಲಾ ಪರಿಷತ್ತಿನ ಆವರಣದಲ್ಲಿ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ.

ಈ ಮಾರಾಟ ಮತ್ತು ಪ್ರದರ್ಶನ ಮೇಳದಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿ ವರೆಗಿನ ಕಲಾವಿದರು ಹಾಗೂ ಕಲಾಪ್ರಕಾರಗಳು ಪಾಲ್ಗೊಳ್ಳಲಿವೆ.
ನೇಕಾರರು ಮತ್ತು ಕುಶಲಕರ್ಮಿಗಳು ಉತ್ಪಾದಿಸುವ ಉತ್ಪನ್ನಗಳಿಗೆ ದೇಶದ ಮುಖ್ಯ ನಗರಗಳಲ್ಲಿ ಮಾರಾಟ ಮೇಳವನ್ನು ಆಯೋಜಿಸುವ ಮೂಲಕ ನೇರವಾಗಿ ಅವರ ಉತ್ಪನ್ನಗಳು ಗ್ರಾಹಕರಿಗೆ ತಲುಪಿಸುವಂತೆ ವ್ಯವಸ್ಥೆ ಮಾಡುವುದು ಮತ್ತು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇಕಾರರೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭವನ್ನು ಹೆಚ್ಚು ಗಳಿಸುವಂತೆ ಮಾಡುವ ಉದ್ದೇಶವನ್ನು ದ ಸೋಕ್ ಮಾರ್ಕೇಟ್ ಪ್ರದರ್ಶನ ಹಾಗೂ ಮಾರಾಟ ಮೇಳ ಹೊಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ