
ಬೆಂಗಳೂರು, ನ.22- ಕ್ರಿಕೆಟ್ ಬೆಟ್ಟಿಂಗ್ ಜೂಜಾಟದ ಅಡ್ಡೆ ಮೇಲೆ ಸಿಸಿಬಿ ಪೆÇಲೀಸರು ದಾಳಿ ಮಾಡಿ ಒಬ್ಬನನ್ನು ಬಂಧಿಸಿ 2.50 ಲಕ್ಷ ರೂ. ಹಣ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಶ್ರೀನಗರದ ಕಾಳಿದಾಸ ಲೇಔಟ್ ನಿವಾಸಿ ವಿಶ್ವನಾಥ್ (34) ಬಂಧಿತ ಆರೋಪಿ.
ಹನುಮಂತನಗರ ಪೆÇಲೀಸ್ ಠಾಣೆ ವ್ಯಾಪ್ತಿಯ ಶ್ರೀನಗರದ ಗುರು ರಾಘವೇಂದ್ರ ಎನ್‍ಕ್ಲೈವ್ ಅಪಾರ್ಟ್‍ಮೆಂಟ್‍ನ 2ನೆ ಮಹಡಿಯಲ್ಲಿರುವ ಶ್ರೀನಿವಾಸ್ ಎಂಬುವವರ ಮನೆಯಲ್ಲಿ ಈತ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಟ್ವೆಂಟಿ-20 ಕ್ರಿಕೆಟ್ ಪಂದ್ಯಕ್ಕೆ ಸಂಬಂಧಪಟ್ಟಂತೆ ಸೋಲು-ಗೆಲುವಿನ ಬಗ್ಗೆ ಸಾರ್ವಜನಿಕರಿಂದ ಕ್ರಿಕೆಟ್ ಬೆಟ್ಟಿಂಗ್ ಹಣವನ್ನು ಫೆÇೀನ್ ಮುಖಾಂತರ ಪಣವಾಗಿ ಕಟ್ಟಿಸಿಕೊಂಡು ಜೂಜಾಟವಾಡುತ್ತಿದ್ದನು.
ಈ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೆÇಲೀಸರು ಮನೆ ಮೇಲೆ ದಾಳಿ ಮಾಡಿ ವಿಶ್ವನಾಥ್ ಎಂಬಾತನನ್ನು ಬಂಧಿಸಿ ಹಣ ಹಾಗೂ ಮೊಬೈಲ್ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡು ಆರೋಪಿ ವಿರುದ್ಧ ಹನುಮಂತನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇನ್ಸ್‍ಪೆಕ್ಟರ್ ಅಂಜನ್‍ಕುಮಾರ್ ಅವರ ನೇತೃತ್ವದಲ್ಲಿ ಈ ದಾಳಿ ಮಾಡಲಾಗಿತ್ತು.