ಅಮೃತಸರ ರೈಲು ದುರಂತಕ್ಕೆ ಜನರ ನಿರ್ಲಕ್ಷ್ಯವೇ ಕಾರಣ: ವರದಿ

ನವದೆಹಲಿಅಮೃತಸರದಲ್ಲಿ ದಸರಾ ಹಬ್ಬದಂದು ನಡೆದಿದ್ದ ಭೀಕರ ರೈಲು ದುರಂತ ಸಂಭವಿಸಲು ಜನರ ನಿರ್ಲಕ್ಷ್ಯವೇ ಕಾರಣ ಎಂದು ರೈಲ್ವೆ ಇಲಾಖೆ ಗುರುವಾರ ಸಲ್ಲಿಸಿರುವ ವರದಿಯಲ್ಲಿ ತಿಳಿಸಿದೆ.

ಅಕ್ಟೋಬರ್ 19ರಂದು ಪಂಜಾಬ್​ನ ಅಮೃತಸರದ ಚೌರಾ ಬಜಾರ್​ ಬಳಿ ನಡೆಯುತ್ತಿದ್ದ ದಸರಾ ಮೇಳದಲ್ಲಿ ಪಾಲ್ಗೊಂಡಿದ್ದ ಜನರ ನಿರ್ಲಕ್ಷ್ಯವೇ ಭೀಕರ ದುರಂತಕ್ಕೆ ಮುಖ್ಯ ಕಾರಣವಾಗಿದೆ ಎಂದು ರೈಲ್ವೆ ಸುರಕ್ಷತೆ ಮುಖ್ಯ ಆಯುಕ್ತ ಎಸ್.ಕೆ.ಪಾಠಕ್ ತಮ್ಮ ವರದಿಯಲ್ಲಿ ತಿಳಿಸಿದ್ದಾರೆ. ಈ ಘಟನೆ ಸಂದರ್ಭದಲ್ಲಿ ಜನರು ಉತ್ಸವ ನೋಡುವುದರಲ್ಲಿ ತಲ್ಲೀನರಾಗಿ ರೈಲ್ವೆ ಹಳಿಗಳ ಮೇಲೆ ನಿಂತಿದ್ದರು. ರೈಲು ಬರುವ ಸೂಚನೆ ಇದ್ದರೂ ಅದನ್ನು ಕಡೆಗಣಿಸಿದ್ದರು. ಈ ಸಂದರ್ಭದಲ್ಲಿ ರೈಲು ಬಂದುದೇ ಈ ದುರಂತಕ್ಕೆ ಮುಖ್ಯ ಕಾರಣ ಎಂದು ವರದಿಯಲ್ಲಿ ಹೇಳಿದ್ದಾರೆ.

ವಾಸ್ತವಿಕ ಮತ್ತು ಸಾಂದರ್ಭಿಕ ಸಾಕ್ಷ್ಯಾಧಾರಗಳನ್ನು ಎಚ್ಚರಿಕೆಯಿಂದ ಪರಿಗಣಿಸಿ ನಾನು ಈ ವರದಿ ನೀಡಿದ್ದು, ಜನರ ನಿರ್ಲಕ್ಷವೇ ದುರಂತಕ್ಕೆ ಕಾರಣ ಎಂದು ಪಾಠಕ್ ಅವರು ಹೇಳಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳುಹಿಸದಿರಲು ಕೆಲವು ಶಿಫಾರಸುಗಳನ್ನು ಮಾಡಿರುವುದಾಗಿ ತಿಳಿಸಿದ್ದಾರೆ.

ಅಕ್ಟೋಬರ್ 19ರಂದು ನಡೆದ ರೈಲು ದುರಂತದಲ್ಲಿ 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಈ ದುರ್ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ