
ಬೆಂಗಳೂರು,ನ.23-ಕೇಂದ್ರದ ಮಾಜಿ ಸಚಿವ ಸಿ.ಕೆ.ಜಾಫರ್ ಶರಿಫ್ ತೀವ್ರ ಅನಾರೋಗ್ಯದಿಂದ ಬಳಲತ್ತಿದ್ದು, ಅವರನ್ನು ನಗರದ ವಕಾರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇತ್ತೀಚಿನ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ಹಾಗಾಗಿ ಯಾವುದೇ ಸಾರ್ವಜನಿಕ ಸಭೆ-ಸಮಾರಂಭಗಳು ಮತ್ತು ರಾಜಕೀಯ ಕಾರ್ಯಕ್ರಮಗಳಲ್ಲೂ ಅವರು ಕಾಣಿಸಿಕೊಳ್ಳುತ್ತಿರಲಿಲ್ಲ.
ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ವರ್ಕಾಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.