ಮಂಡ್ಯದಲ್ಲಿ ಬಸ್ ದುರಂತ: ಮಡಿದವರಿಗೆ ಗಣ್ಯರ ಕಂಬನಿ

ದೆಹಲಿ/ಬೆಂಗಳೂರು, ನ.24- ವಿಸಿ ನಾಲೆ ಬಸ್ ದುರಂತದಲ್ಲಿ ಮೃತಟ್ಟವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೆಗೌಡ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಕನಗನಮರಡಿ ಬಸ್ ದುರಂತಕ್ಕೆ ಸಂಬಂಧಿಸಿದಂತೆ ದಿಗ್ಬ್ರಮೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿಎಚ್.ಡಿ.ಕುಮಾರಸ್ವಾಮಿ, ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ ಸೂಚಿಸಿದ್ದಾರೆ.

ಜಿಲ್ಲಾಉಸ್ತುವಾರಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರುಜಿಲ್ಲಾಧಿಕಾರಿಯೊಂದಿಗೆಕೂಡಲೇ ಸ್ಥಳಕ್ಕೆ ತೆರಳಿ ರಕ್ಷಣಾಕಾರ್ಯಾಚರಣೆ ಚುರುಕುಗೊಳಿಸುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಈ ಘಟನೆಯಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ಸೂಚಿಸಿರುವ ಮುಖ್ಯಮಂತ್ರಿಯವರು, ಹೆಚ್ಚಿನ ಅನಾಹುತ ಸಂಭವಿಸದಂತೆ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ತೆರಳಿ ಪರಿಹಾರಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಸಿ.ಎಸ್.ಪುಟ್ಟರಾಜು ದೌಡು:
ಜಿಲ್ಲಾಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು , ಸಾರಿಗೆಸಚಿವಡಿ.ಸಿ.ತಮ್ಮಣ್ಣ, ಶಾಸಕಶ್ರೀಕಂಠಯ್ಯ, ಜಿಲ್ಲಾಧಿಕಾರಿ ಮಂಜುಶ್ರೀ ಮತ್ತು ಪೆÇಲೀಸ್ ವರಿಷ್ಠಾಧಿಕಾರಿ ಶಿವರಾಜ್ ಸ್ಥಳದಲ್ಲಿ ಮೊಕ್ಕಾಂ ಹೂಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆನಡೆದಸ್ಥಳಕ್ಕೆಮಧ್ಯಾಹ್ನ 2-30 ರವೇಳೆಗೆ ಆಗಮಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಘಟನೆಯಲ್ಲಿ ಮೃತಪಟ್ಟ ಕುಟುಂಬದವರ ದುಃಖ ಕಂಡ, ಸ್ವತಃ ಮುಖ್ಯಮಂತ್ರಿಗಳು ಕಣ್ಣೀರಿಟ್ಟರು.

ಘಟನೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ ರೂ.ಐದು ಲಕ್ಷ ಪರಿಹಾರ ಘೋಷಿಸಿದ ಮುಖ್ಯಮಂತ್ರಿಗಳು, ತಮಗೆ ಘಟನೆಯಿಂದ ಮನಸ್ಸಿಗೆ ತೀವ್ರ ದುಃಖವಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ಹಾಗೂ ಕುಟುಂಬದವರಿಗೆ ದುಃಖ ಬರಿಸಲು ದೇವರು ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

mandya,bus accident

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ