ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ನೆ ಅಗತ್ಯವಿಲ್ಲ; ಮಂದಿರ ನಿರ್ಮಾಣ ಬಿಜೆಪಿ ಪ್ರಮುಖ ಆದ್ಯತೆ: ಅಮಿತ್ ಶಾ

ನವದೆಹಲಿ: ಅಯೋಧ್ಯೆ ರಾಮ ಮಂದಿರ ಕುರಿತಾದ ವಿಚಾರ ಸಧ್ಯ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿರುವುದರಿಂದ ರಾಮ ಮಂದಿರ ನಿರ್ಮಾಣ ಕುರಿತು ಸುಗ್ರೀವಾಜ್ನೆ ಹೊರಡಿಸುವ ಅಗತ್ಯವಿಲ್ಲ. ಆದರೆ ರಾಮ ಮಂದಿರ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ.

ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿರುವ ಅಮಿತ್ ಶಾ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಬಿಜೆಪಿ ಪ್ರಮುಖ ಆದ್ಯತೆಗಳಲ್ಲಿ ಒಂದು. ಈ ವಿಚಾರದಲ್ಲಿ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಆದರೆ ಪ್ರಸ್ತುತ ಪ್ರಕರಣ ಸುಪ್ರೀಂಕೋರ್ಟ್ ಮುಂದಿದೆ. ಹೀಗಾಗಿ ಈ ವಿಚಾರವನ್ನು ಹೆಚ್ಚಾಗಿ ಚರ್ಚಿಸಲು ಬಯಸುವುದಿಲ್ಲ. ಇನ್ನು ರಾಮ ಮಂದಿರ ನಿರ್ಮಾಣಕ್ಕಾಗಿ ಸುಗ್ರೀವಾಜ್ನೆಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಜನವರಿಯಲ್ಲಿ ಈ ವಿಷಯ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆಯಾಗಲಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪೂರಕವಾಗುವಂಥ ತೀರ್ಪು ನ್ಯಾಯಾಲಯದಿಂದ ಹೊರಬೀಳಲಿದೆ ಎಂಬ ವಿಶ್ವಾಸವನ್ನು ಶಾ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತವಾಗಿದ್ದು, ಪ್ರಧಾನಿ ಮೋದಿ ದೇಶದ ಅಪ್ರತಿಮ ನಾಯಕರಾಗಿ ಮತ್ತೆ ಹೊರಹೊಮ್ಮಲಿದ್ದಾರೆ ಎಂದು ತಿಳಿಸಿದ್ದಾರೆ.

Ram Mandir should be built, our stand is clear: Amit Shah

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ