ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಎರಡು ದಿನ ಮಹಿಳೆಯರಿಗೆ ಅವಕಾಶ ನೀಡಲು ಮುಂದಾದ ಕೇರಳ ಸರ್ಕಾರ

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ವಿಶೇಷವಾಗಿ ಮಹಿಳೆಯರಿಗೆ ಮಾತ್ರ ಎರಡು ದಿನ ಅವಕಾಶ ನೀಡಲು ಕೇರಳ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಕೇರಳ ಹೈಕೋರ್ಟ್ ಗೆ ಮಾಹಿತಿ ನೀಡಿದೆ.

ಅಯ್ಯಪ್ಪ ದರ್ಶನಕ್ಕೆ ಮಹಿಳೆಯರಿಗೂ ಅವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದರೂ ಈ ನಿಯಮ ಪಾಲನೆ ಈ ವರೆಗೂ ಸಾಧ್ಯವಾಗಿಲ್ಲ. ಈ ಹಿನ್ನಲೆಯಲ್ಲಿ ಎರಡು ದಿನವನ್ನು ಮಾತ್ರ ಮಹಿಳಾ ಭಕ್ತರ ಪ್ರವೇಶಕ್ಕೆಂದೇ ಮೀಸಲಿಡಲು ಸಿದ್ಧವಿರುವುದಾಗಿ ಕೇರಳ ಸರ್ಕಾರ, ರಾಜ್ಯ ಹೈಕೋರ್ಟ ಗೆ ಮಾಹಿತಿ ನೀಡಿದೆ.

ಪ್ರತಿಭಟನೆ ಹಿನ್ನಲೆಯಲ್ಲಿ ಇದೂವರೆಗೆ ಅಯ್ಯಪ್ಪ ದರ್ಶನ ಸಾಧ್ಯವಾಗ ಹಿನ್ನಲೆಯಲ್ಲಿ ಕೆಲ ಮಹಿಳೆಯರು ಕೇರಳ ಹೈಕೋರ್ಟ್’ನಲ್ಲಿ ಅರ್ಜಿ ಸಲ್ಲಿಸಿದ್ದರು.
ಅರ್ಜಿಯಲ್ಲಿ ಶಬರಿಮಲೆ ಸುತ್ತಮುತ್ತಲ ಪ್ರದೇಶದಿಂದ ಪ್ರತಿಭಟನಾನಿರತರನ್ನು ತೆರವುಗೊಳಿಸಬೇಕು. ಮಹಿಳೆಯರ ಪ್ರವೇಶಕ್ಕೆ ವಿಶೇಷ ಭದ್ರತೆಯೊದಗಿಸಬೇಕೆಂದು ಕೇಳಿದ್ದರು. ಮಹಿಳೆಯರ ಪ್ರವೇಶಕ್ಕೆಂದೇ 3 ದಿನ ಮೀಸಡಬೇಕೆಂದೂ ಕೂಡ ಕೋರಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇರಳ ಸರ್ಕಾರ, 3 ದಿನ ಮೀಸಲಿಡಲು ಸಾಧ್ಯವಿಲ್ಲ. 2 ದಿನವನ್ನು ಮಹಿಳೆಯರಿಗೆ ಅವಕಾಶ ನೀಡಲು ಸಿದ್ಧ ಎಂದು ತಿಳಿಸಿದೆ. ಈ ಹಿನ್ನಲೆಯಲ್ಲಿ ನ್ಯಾಯಾಲಯ, ಈ ಸಂಬಂಧ 15 ದಿನಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

2 days can be set apart for women to pray,Sabarimala: Kerala government,High Court

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ