ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆ ಬಳಿ ಇಂದು ನಡೆದ ಎನ್ ಕೌಂಟರ್ ನಲ್ಲಿ ಆರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.
ಶೋಪಿಯಾನ್ ಜಿಲ್ಲೆಯ ಕರ್ಪಾನ್ ಬಾಟಗುಂಡಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 6 ಉಗ್ರರನ್ನು ಹತ್ಯೆಗೈದಿದ್ದಾರೆ. ಉಗ್ರರಿಂದ ಅಪಾರ ಪ್ರಮಾಣದ ಶಸಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಶೋಪಿಯಾನ್ ಜಿಲ್ಲೆಯ ನಾದಿಗಾಮ್ ಗ್ರಾಮದಲ್ಲಿ ಕಳೆದ ವಾರ ನಡೆದ ಕಾರ್ಯಾಚರಣೆ ವೇಳೆಯಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈಯಲಾಗಿತ್ತು. ಈ ಕಾರ್ಯಾಚರಣೆ ವೇಳೆ ನಾಲ್ವರು ಸೇನಾ ಯೋಧರು ಹುತಾತ್ಮ ರಾಗಿದ್ದರು.
Soldier Killed In Encounter In Jammu And Kashmir, 6 Terrorists Shot Dead