
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ರೆಬೆಲ್ ಸ್ಟಾರ್, ಮಾಜಿ ಸಚಿವ ಅಂಬರೀಶ್ ನಿಧನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಕರ್ನಾಟಕದ ಸುಪುತ್ರನಾಗಿದ್ದ ಅಂಬರೀಶ್ ನಿಧನದಿಂದ ಕಾಂಗ್ರೆಸ್ ಕುಟುಂಬ ಒಬ್ಬ ಸದಸ್ಯನನ್ನು ಕಳೆದುಕೊಂಡಂತಾಗಿದೆ. ನಟ ಹಾಗೂ ರಾಜಕಾರಣಿಯಾಗಿ ಕರ್ನಾಟಕ ಹಾಗೂ ದೇಶಾದ್ಯಂತ ಅಪಾರ ಅಭಿಮಾನಿಗಳನ್ನು ಅಂಬರೀಶ್ ಹೊಂದಿದ್ದರು. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ತೀವ್ರ ಸಂತಾಪ ಸೂಚಿಸಿರುವುದಾಗಿ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಅಂಬರೀಷ್ ನಿಧನಕ್ಕೆ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ತೀವ್ರ ಸಂತಾಪ ಸೂಚಿಸಿದ್ದಾರೆ.
Rebel Star, Ambareesh,Demise, Rahul gandhi, Condolence