ರೇಸ್‍ಕೋರ್ಸ್ ರಸ್ತೆಗೆ ನಟ ಅಂಬರೀಶ್ ಹೆಸರು ನಾಮಕರಣ ಮಾಡಬೇಕೆಂದು ವಾಣಿಜ್ಯ ಮಂಡಳಿ ಕಾರ್ಯದರ್ಶಿ ಬಾ.ಮಾ.ಹರೀಶ್ ಮನವಿ

ಬೆಂಗಳೂರು, ನ.27- ರೇಸ್‍ಕೋರ್ಸ್ ರಸ್ತೆಗೆ ನಟ ಅಂಬರೀಶ್ ಹೆಸರು ನಾಮಕರಣ ಮಾಡಬೇಕೆಂದು ಚಲನಚಿತ್ರ ವಾಣಿಜ್ಯ ಮಂಡಳಿಯ ಗೌರವ ಕಾರ್ಯದರ್ಶಿ ಬಾ.ಮಾ.ಹರೀಶ್ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ, ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬಾ.ಮಾ.ಹರೀಶ್ ಟ್ವೀಟ್ ಮಾಡಿ ಈ ಮನವಿ ಮಾಡಿದ್ದಾರೆ.

ಇಂದು ಸಂಜೆ ವಾಣಿಜ್ಯ ಮಂಡಳಿಯಲ್ಲಿ ಸಭೆ ಹಮ್ಮಿಕೊಂಡಿದ್ದು, ಅಂಬಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ದಿನಾಂಕ ನಿಗದಿ ಪಾಡಿಸಲಾಗುತ್ತದೆ.

ನಾಳೆ ಅಥವಾ ನಾಡಿದ್ದು ಶ್ರದ್ಧಾಂಜಲಿ ಸಭೆ ನಡೆಯುವ ಸಾಧ್ಯತೆ ಇದೆ. ಈ ಸಭೆಗೆ ಕಲಾವಿದರು, ನಿರ್ಮಾಪಕರು, ಹಂಚಿಕೆದಾರರು ಮತ್ತು ಒಕ್ಕೂಟದ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ