ಬೆಂಗಳೂರು, ನ.28- ಆಸ್ತಿ ತೆರಿಗೆ ಹೆಚ್ಚಳ ವಿರೋಧಿಸಿ ಸಿಪಿಐಎಂ ಕಾರ್ಯಕರ್ತರು ಬಿಬಿಎಂಪಿ ಕೇಂದ್ರ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಪದೇ ಪದೇ ಆಸ್ತಿ ತೆರಿಗೆ ಹೆಚ್ಚಳದಿಂದ ಜನರಿಗೆ ತೊಂದರೆಯಾಗುತ್ತಿದೆ.ಕೂಡಲೇ ಆಸ್ತಿ ತೆರಿಗೆ ಪ್ರಸ್ತಾಪವನ್ನು ಕೈ ಬಿಡಬೇಕೆಂದು ಆಗ್ರಹಿಸಿದರು.ಇಂದು ಕೌನ್ಸಿಲ್ ಸಭೆ ಆಸ್ತಿ ತೆರಿಗೆ ಹೆಚ್ಚಳ ಪ್ರಸ್ತಾಪ ಬರಬಹುದು ಎಂಬ ಹಿನ್ನೆಲೆಯಲ್ಲಿ ಸಿಪಿಐಎಂ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡರು.ವಸತಿ ವಲಯಕ್ಕೆ ಶೇ.25ರಷ್ಟು ಹಾಗೂ ವಸತಿಯೇತರ ವಲಯಗಳಿಗೆ ಶೇ.30ರಷ್ಟು ಆಸ್ತಿ ತೆರಿಗೆ ಹೆಚ್ಚಳ ಮಾಡಲು ಬಿಬಿಎಂಪಿ ಮುಂದಾಗಿದೆ.
ಮಾರುಕಟ್ಟೆಗಳಿಂದ ಕಡಿಮೆ ತೆರಿಗೆ ಸಂಗ್ರಹವಾಗುತ್ತಿದೆ.ವಾಣಿಜ್ಯ ಕಟ್ಟಡಗಳಲ್ಲಿ ಕೋಟಿಗಟ್ಟಲೆ ಆಸ್ತಿ ತೆರಿಗೆ ಬಾಕಿ ಇದೆ. ಇದನೆಲ್ಲಾ ಸರಿ ಪಡಿಸುವುದು ಬಿಟ್ಟು ನಗರದ ನಾಗರಿಕರ ಮೇಲೆ ಬರೆ ಎಳೆಯಲು ಹೊರಟಿರುವುದು ಸರಿಯಲ್ಲ. ಕೂಡಲೇ ಆಸ್ತಿ ತೆರಿಗೆ ಹೆಚ್ಚಳ ಮಾಡುವುದನ್ನು ಕೈ ಬಿಡಬೇಕೆಂದು ಸಿಪಿಐಎಂ ದಕ್ಷಿಣ ವಲಯ ಕಾರ್ಯದರ್ಶಿ ಉಮೇಶ್ ಪ್ರತಿಭಟನೆ ವೇಳೆ ಒತ್ತಾಯಿಸಿದರು.