ಬೆಂಗಳೂರು,ನ.28- ಕರುನಾಡ ಯುವಶಕ್ತಿ ವತಿಯಿಂದ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಥಮ ಅಧ್ಯಕ್ಷ ಎಚ್.ವಿ.ನಂಜುಂಡಯ್ಯನವರ ಸ್ಮರಣಾರ್ಥ ನಾಳೆ ಬೆಳಗ್ಗೆ 11.30ಕ್ಕೆ ಗಾಂಧಿಭವನದಲ್ಲಿ 63ನೇ ಕನ್ನಡ ರಾಜ್ಯೋತ್ಸವ ಹಾಗೂ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಕ್ಷ ಎಂ.ಆರ್.ಅನಿಲ್ ಕುಂಚಿ , ಕಾರ್ಯಕ್ರಮದಲ್ಲಿ ಹೊಸದುರ್ಗ ಕುಂಚಿಟಿಗ ಮಹಾಸಂಸ್ಥಾನ ಮಠದ ಡಾ.ಶಾಂತವೀರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಇದಲ್ಲದೆ ಶಾಸಕರಾದ ಮಂಜುನಾಥ್, ಕೆಪಿಸಿಸಿ ವಕ್ತಾರ ಮುರುಳೀಧರ್ ಹಾಲಪ್ಪ, ವಕೀಲರಾದ ಡಾ. ಅಂಜನಪ್ಪ, ಎಂ.ನೀಲಯ್ಯ, ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಬಿಬಿಎಂಪಿ ಸದಸ್ಯೆ ಮಂಜುಳಾ ಎಂ.ನಾರಾಯಣಸ್ವಾಮಿ, ಲೋಕೇಶ್ ಪಾಲ್ಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ ಆನಂದರಾವ್ ವೃತ್ತದಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕನ್ನಡ ಧ್ವಜರೋಹಣ ನೆರವೇರಿಸಲಾಗುವುದು.ಸರ್ಕಾರಿ ಶಾಲೆಯ ಪ್ರತಿಭಾನ್ವಿತ ಮಕ್ಕಳಿಗೆ ಪುರಸ್ಕಾರ, ಆಯ್ದ ವಿಕಲಚೇತನರಿಗೆ ಸಲಕರಣಿ ವಿತರಣೆ, ಆಟೋ ಚಾಲಕರಿಗೆ ಸಮವಸ್ತ್ರ, ಪಠ್ಯ ಪುಸ್ತಕಗಳನ್ನು ವಿತರಿಸಲಾಗುವುದು ಎಂದು ಹೇಳಿದರು.