ಡಿ. 1ರಂದು ಹೋಬಳಿ ಮಟ್ಟದ ಒಂದನೇ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು,ನ.28-ಬೆಂಗಳೂರು ನಗರ ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿದರಹಳ್ಳಿ ಹೋಬಳಿ ಮಟ್ಟದ ಒಂದನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿ.1ರಂದು ಆವಲಹಳ್ಳಿ ಗ್ರಾಮದ ಶ್ರೀಮುನೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ನೆರವೇರಿಸಲಾಗುವುದು ಎಂದು ಹೋಬಳಿ ಕಸಾಪ ಅಧ್ಯಕ್ಷ ನಾಗೇಶ್ ಹಿಂಡಹಳ್ಳಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕವಿ ಡಾ.ಟಿ.ಯಲ್ಲಪ್ಪನವರನ್ನುಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಆವಲಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಜ್ಯೋತಿ ದೇವರಾಜ್ ಅವರು ರಾಷ್ಟ್ರಧ್ವಜರೋಹಣ ಮಾಡಲಿದ್ದಾರೆ. ಮ.ವಿ.ಸ ಕ್ಷೇತ್ರದ ಕಸಾಪ ಅಧ್ಯಕ್ಷ ಡಾ.ಅಜಿತ್ ಕುಮಾರ್, ನಾಡಧ್ವಜವನ್ನು ಬಿದರಹಳ್ಳಿ ಹೋಬಳಿಯ ಕಸಾಪ ಅಧ್ಯಕ್ಷ ನಾಗೇಶ್‍ಹಿರಂಡಹಳ್ಳಿ ಅವರು ಪರಿಷತ್ತಿನ ಧ್ವಜಾರೋಹ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.

ಬೆಳಗ್ಗೆ 7.45ಕ್ಕೆ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸಿ.ಮುನಿರಾಜು ಪುಸ್ತಕ ಮಳಿಗೆಗಳ ಉದ್ಘಾಟನೆ ನೆರವೇರಿಸಲಿದ್ದು, ಮಂಡೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಜನಾರ್ಧನ ಗೌಡ, ಆವಲಹಳ್ಳಿ ಗ್ರಾಪಂ ಉಪಾಧ್ಯಕ್ಷ ಶಾಂತಮ್ಮ ಶಿವಣ್ಣನವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಈ ಸಮ್ಮೇಳನದಲ್ಲಿ ಕನ್ನಡ ಜಾಗೃತಿ ಮೆರವಣಿಗೆ , ವಿಚಾರಗೋಷ್ಠಿಗಳು, ಕವಿಗೋಷ್ಠಿ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಬಹಿರಂಗ ಅಧಿವೇಶನ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಬಿದರಹಳ್ಳಿ ಸರ್ಕಾರಿ ಪ್ರೌಢಶಾಲೆ ಆವರಣದಿಂದ ಹೊರಟು, ಹಿರಂಡಹಳ್ಳಿ ಮಾರ್ಗವಾಗಿ ಶ್ರೀ ಮುನೀಶ್ವರ ಸ್ವಾಮಿ ದೇವಾಲಯ ಅವರಣದಲ್ಲಿ ಸಮ್ಮೇಳನ ಸಭಾಂಗಣ ತಲುಪುವುದು.
ಈ ಸಮ್ಮೇಳನಕ್ಕೆ ಸ್ಥಳೀಯ ಸಂಘ ಸಂಸ್ಥೆಗಳು, ಶಾಲಾಕಾಲೇಜುಗಳ ಸಹಕರಿಸಲಿದ್ದು, ನಾಡಿನ ಹೆಸರಾಂತ ಪತ್ರಕರ್ತರು ಚಲನಚಿತ್ರ ನಟನಟಿಯರು ಸಾಹಿತಿಗಳು, ಜನಪ್ರತಿನಿಧಿಗಳು ಆಗಮಿಸಲಿದ್ದಾರೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ