ಬೆಂಗಳೂರು, ನ.29- ಕೆಜಿಎಫ್ನ ಮಾಜಿ ಶಾಸಕ ಎಂ.ಭಕ್ತವತ್ಸಲಂ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಭಕ್ತವತ್ಸಲಂ ಅವರು ಹೃದಯಾಘಾತದಿಂದ ನಿಧನರಾದರೆಂಬ ಸುದ್ದಿ ತಿಳಿದು ದುಃಖವಾಗಿದೆ.ಕೋಲಾರ ಜಿಲ್ಲೆಯ ಕೆಜಿಎಫ್ನಲ್ಲಿ ಐದು ಬಾರಿ, ನಗರಸಭೆ ಅಧ್ಯಕ್ಷರಾಗಿ, ಒಮ್ಮೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ಮೂರು ಬಾರಿ ವಿಧಾನಸಭೆ ಸದಸ್ಯರಾಗಿ ಅವರು ಸೇವೆ ಸಲ್ಲಿಸಿದ್ದರು.ಜನಾನುರಾಗಿಯಾಗಿ ಸಾರ್ವಜನಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಭಕ್ತವತ್ಸಲಂ ನಮ್ಮ ಪಕ್ಷದ ಮುಖಂಡರಾಗಿದ್ದರು. ಅವರ ನಿಧನದಿಂದ ಸಾರ್ವಜನಿಕ ಕ್ಷೇತ್ರ ಮುತ್ಸದ್ಧಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಸಂತಾಪ ಸೂಚನೆಯಲ್ಲಿ ತಿಳಿಸಿದ್ದಾರೆ.
ಭಕ್ತವತ್ಸಲಂ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ ಹಾಗೂ ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಸಂತಾಪ ಸಂದೇಶದಲ್ಲಿ ಮುಖ್ಯಮಂತ್ರಿ ತಿಳಿಸಿದ್ದಾರೆ.