ಬೆಂಗಳೂರು, ನ.29-ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿಯವರು ನಾಳೆ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ.
ಮಲೆಮಹದೇಶ್ವರ ಬೆಟ್ಟದಲ್ಲಿರುವ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಿದ್ದು, ನಂತರ ಮಲೆಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ನಿರ್ಮಿಸಿರುವ ಜೇನುಮಲೆ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸುವರು.ನಂತರ ಸುತ್ತೂರು ಮಠದ ವತಿಯಿಂದ ನಿರ್ಮಿಸಿರುವ ಅತಿಥಿ ಗೃಹ ಉದ್ಘಾಟನೆ ನೆರವೇರಿಸಿ ಸಂಜೆ ವೇಳೆಗೆ ಬೆಂಗಳೂರಿಗೆ ಹಿಂದಿರುಗುವ ಕಾರ್ಯಕ್ರಮವಿದೆ.
ಅಭಿಮಾನದ ಹೆಸರಿನಲ್ಲಿ ಮಾಧ್ಯಮದವರಿಗೆ ತೊಂದರೆ ಕೊಡುವುದು ಸರಿಯಲ್ಲ. ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಅವರ ವಿರುದ್ಧ ಪ್ರತಿಭಟನೆ ಮಾಡಬಾರದು ಎಂದು ಮುಖ್ಯಮಂತ್ರಿ ಕರೆ ಕೊಟ್ಟಿದ್ದಾರೆ.