ಬೆಂಗಳೂರು, ನ.29-ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೂ ಮುನ್ನ ಶಾಸಕರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಶಾಸಕರ ಭವನದ ಚಿಕಿತ್ಸಾಲಯದ ವತಿಯಿಂದ ಡಿ.1ರಂದು ವಿಧಾನಸಭೆ ಹಾಗೂ ವಿಧಾನಪರಿಷತ್ ಸದಸ್ಯರಿಗೆ ಮಧುಮೇಹ ರಕ್ತ ಪರಿಶೀಲನೆ ಶಿಬಿರವನ್ನು ಆಯೋಜಿಸಲಾಗಿದೆ.
ಶಾಸಕರ ಭವನ 2ರಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಮಧುಮೇಹ ರಕ್ತ ಪರಿಶೀಲನಾ ಶಿಬಿರ ನಡೆಯಲಿದ್ದು, ಅಂದು ಬೆಳಗ್ಗೆ 8.30ರಿಂದ ಸಂಜೆ 4ಗಂಟೆಯವರೆಗೂ ರಕ್ತ ಪರೀಕ್ಷೆ ಮಾಡಲಾಗುತ್ತದೆ ಎಂದು ವಿಧಾನಸಭೆ ಸಚಿವಾಲಯದ ಪ್ರಕಟಣೆ ತಿಳಿಸಿದೆ.