ಬೆಂಗಳೂರು, ನ.29- ತಾವು ಅನಾರೋಗ್ಯಕ್ಕೆ ಒಳಗಾಗಿಲ್ಲ. ತಂದೆ-ತಾಯಿ, ದೇವರ ಆಶೀರ್ವಾದ ಹಾಗೂ ನಾಡಿನ ಜನರ ಶುಭ ಹಾರೈಕೆಯೇ ನಮಗೆ ಶ್ರೀರಕ್ಷೆ ಎಂದು ಹೇಳಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಖಾಸಗಿ ಸುದ್ದಿ ವಾಹಿನಿ ಕಚೇರಿ ಮುಂದೆ ನಡೆಸುತ್ತಿರುವ ಪ್ರತಿಭಟನೆಯನ್ನು ನಿಲ್ಲಿಸುವಂತೆ ಜೆಡಿಎಸ್ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.
ನಾಡಿನ ಜನರ ಶುಭ ಹಾರೈಕೆ ನಮಗೆ ಶ್ರೀರಕ್ಷೆಯಾಗಿದ್ದು, ಜನರ ಒಳಿತಿಗಾಗಿ ಕೆಲಸ ಮಾಡುವುದೇ ನಮ್ಮ ಆದ್ಯತೆಯಾಗಿದೆ.ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಆತಂಕ, ಉದ್ವೇಗಕ್ಕೆ ಒಳಗಾಗಬಾರದು ಎಂದು ಹೇಳಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಕಚೇರಿಯಲ್ಲಿ ಸಿಎಂ ಸಂದೇಶವನ್ನು ಬಿಡುಗಡೆ ಮಾಡಿದ್ದು, ಪ್ರತಿಭಟನೆ ನಿಲ್ಲಿಸುವಂತೆ ತಿಳಿಸಿದ್ದಾರೆ.
ಭಾರತೀಯ ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳು ಹೊಂದಿರುವ ಅಭಿಪ್ರಾಯ, ಸ್ವಾತಂತ್ರ್ಯವನ್ನು ಗೌರವಿಸುವುದಾಗಿ ತಿಳಿಸಿರುವ ಮುಖ್ಯಮಂತ್ರಿಗಳು, ಮಾಧ್ಯಮಗಳಲ್ಲಿ ಪ್ರಸಾರವಾದಂತೆ ತಾವು ಅನಾರೋಗ್ಯಕ್ಕೆ ಒಳಗಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.