ಮಹಾನಗರ ಪಾಲಿಕೆಗಳ ಮಹಿಳಾ ಅಧಿಕಾರಿಗಳು ಮತ್ತು ನೌಕರರುಗಳಿಗೆ ಥ್ರೋಬಾಲ್ ಪಂದ್ಯಾವಳಿ ಆಯೋಜನೆ

ಬೆಂಗಳೂರು ನ.30- ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಮಹಾನಗರ ಪಾಲಿಕೆಗಳ ಮಹಿಳಾ ಅಧಿಕಾರಿ ಮತ್ತು ನೌಕರರುಗಳಿಗೆ ನಾಳೆ ಥ್ರೋಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ.

ಮಲ್ಲೇಶ್ವರಂ ಆಟದ ಮೈದಾನದಲ್ಲಿ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿರುವ ಥ್ರೋಬಾಲ್ ಪಂದ್ಯಾವಳಿಯನ್ನು ಮೇಯರ್ ಗಂಗಾಂಬಿಕೆ ಉದ್ಘಾಟಿಸಲಿದ್ದಾರೆ.

ಆಯುಕ್ತ ಮಂಜುನಾಥ್ ಪ್ರಸಾದ್, ಶಾಸಕ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಹಿರಿಯ ವಕೀಲ ಲಕ್ಷ್ಮಿನಾರಾಯಣ, ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಪರಿಷÀತ್ ಅಧ್ಯಕ್ಷ ಎಸ್.ಎಚ್.ಗುರುಮೂರ್ತಿ, ರಮೇಶ್ ಸಂಗ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್‍ರಾಜ್ ತಿಳಿಸಿದ್ದಾರೆ.

ಈ ಪಂದ್ಯಾವಳಿಯಲ್ಲಿ ಬಿಬಿಎಂಪಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ತುಮಕೂರು, ಮೈಸೂರು, ವಿಜಯಪುರ, ಶಿವಮೊಗ್ಗ, ಬೆಳಗಾವಿ, ಬಳ್ಳಾರಿ, ಗುಲ್ಬರ್ಗ ಮಹಾನಗರ ಪಾಲಿಕೆಗಳ ಮಹಿಳಾ ಅಧಿಕಾರಿಗಳು ಮತ್ತು ನೌಕರರು ಭಾಗವಹಿಸುತ್ತಿದ್ದಾರೆ.
ಇದೇ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ರಾಜ್ಯಕ್ಕೆ ಕೀರ್ತಿ ತಂದ ಕ್ರೀಡಾಪಟುಗಳಾದ ಸಿಂಚನಾ ಕೆ., ಗುಣಶ್ರೀ, ಎನ್.ಉಷಾರಾಣಿ, ಮೋಸಸ್ ಕೇತನ್ ಹಾಗೂ ಸರ್ಕಾರಿ ನೌಕರರಿಗೆ 6ನೆ ವೇತನ ಆಯೋಗದ ವರದಿ ಜಾರಿಗೆ ಶ್ರಮಿಸಿದ ಬಿ.ಬಿ.ಮಂಜೇಗೌಡ ಅವರನ್ನು ಸನ್ಮಾನಿಸಲಾಗುವುದು ಎಂದು ಅಮೃತ್‍ರಾಜ್ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ