ಜಿ20 ಶೃಂಗಸಭೆ: ಸೌದಿ ದೊರೆ-ಪ್ರಧಾನಿ ಮೋದಿ ಭೇಟಿ; ಮಹತ್ವದ ಮಾತುಕತೆ

ಬ್ಯೂನಸ್‌ ಐರಿಸ್‌ : ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಅರ್ಜೆಂಟಿನಾಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಸೌದಿ ಅರೇಬಿಯಾ ದೊರೆಯನ್ನು ಮೊಹಮ್ಮದ್‌ ಬಿನ್‌ ಸಲ್ಮಾನ್‌ ಅಲ್‌ ಸೌದ್‌ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.

ಭೇಟಿ ವೇಳೆ ಆಹಾರ ಭದ್ರತೆ, ಬಂಡವಾಳ ಹೂಡಿಕೆ, ತಂತ್ರಜ್ಞಾನ, ನವೀಕೃತ ಇಂಧನ ಕುರಿತಾಗಿ ಮಹತ್ವದ ಚರ್ಚೆಗಳನ್ನು ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಸೌದಿ ಅರೇಬಿಯಾದ ದೊರೆ ಮೊಹಮ್ಮದ್‌ ಬಿನ್‌ ಸಲ್ಮಾನ್‌ ಅಲ್‌ ಸೌದ್‌ ಅವರನ್ನು ಭೇಟಿ ಮಾಡಿ ಉಭಯ ರಾಷ್ಟ್ರಗಳ ದ್ವಿಪಕ್ಷಿಯ ಸಂಬಂಧಗಳನ್ನು ಗಟ್ಟಿಗೊಳಿಸುವ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಹೇಳಿದ್ದಾರೆ.

ಸಂಸ್ಕೃತಿ, ಆರ್ಥಿಕ, ಇಂಧನ ಕ್ಷೇತ್ರದಲ್ಲಿ ಹೂಡಿಕೆ ಹಾಗೂ ವಿವಿಧ ಯೋಜನೆಗಳ ಅನುಷ್ಠಾನ ಕುರಿತು ಮಾತುಕತೆ ನಡೆಸಲಾಗಿದ್ದು, ಈ ಭೇಟಿ ಫಲಪ್ರದವಾಗಿದೆ ಎಂದು ಮೋದಿ ತಿಳಿಸಿದ್ದಾರೆ.

G20 Summit,PM Modi Meets Saudi Crown Prince, Investments, Defence Ties Discussed

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ