ಆಡಳಿತಕ್ಕೆ ಚುರುಕು ಮುಟ್ಟಿಸುವ ಹಿನ್ನಲೆಯಲ್ಲಿ 11 ಐಎಎಸ್ ವರ್ಗಾವಣೆ

ಬೆಂಗಳೂರು, ನ.30-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆಡಳಿತಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ಸಾರಿಗೆ, ಶಿಕ್ಷಣ, ಇಂಧನ ಇಲಾಖೆ ಸೇರಿದಂತೆ ಹಲವು ಇಲಾಖೆಗಳ 11 ಐಎಎಸ್ ಅಧಿಕಾರಿಗಳನ್ನಿ ವರ್ಗಾವಣೆ ಮಾಡಿದ್ದಾರೆ.

ವರ್ಗಾವಣೆಯಲ್ಲಿ ಪ್ರಮುಖವಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಡಾ.ಶಾಲಿನಿ ರಜನೀಶ್, ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಸ್.ಆರ್.ಉಮಾಶಂಕರ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವಿ.ಪೆÇನ್ನರಾಜ್, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿಯಾಗಿದ್ದ ಗಂಗಾರಾಮ್ ಬಡೇರಿಯಾ ಅವರನ್ನು ಇಲಾಖೆ ಸೇವೆಯಿಂದ ಬಿಡುಗಡೆ ಮಾಡಿ, ಆ ಸ್ಥಾನಕ್ಕೆ ಕೆಪಿಟಿಸಿಎಲ್‍ನ ವ್ಯವಸ್ಥಾಪಕ ನಿರ್ದೇಶಕ ಜಿ.ಕುಮಾರ್‍ನಾಯಕ್, ಬೆಂಗಳೂರು ಪ್ರಾದೇಶಿಕ ಆಯುಕ್ತ ಶಿವಯೋಗಿ ಕಳಸದ್, ಬಿಬಿಎಂಪಿಯ ಹೆಚ್ಚುವರಿ ಆಯುಕ್ತರಾಗಿದ್ದ ಬಿ.ರಣದೀಪ್ , ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿಯಾಗಿದ್ದ ವಸಂತಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಆಯುಕ್ತರ ಹುದ್ದೆಯನ್ನು ಪೌರಾಡಳಿತ ಇಲಾಖೆ ನಿರ್ದೇಶಕರ ಹುದ್ದೆಗೆ ಸರಿಸಮಾನವಾಗಿ ಮೇಲ್ದರ್ಜೆಗೇರಿಸಿ ಆದೇಶ ಹೊರಡಿಸಲಾಗಿದೆ.

ಹುದ್ದೆಯ ನಿರೀಕ್ಷೆಯಲ್ಲಿದ್ದ ಅಪರ ಮುಖ್ಯ ಮುಖ್ಯ ಕಾರ್ಯದರ್ಶಿ ವಿ.ಮಂಜುಳಾ ಅವರನ್ನು ಡಿಪಿಎಆರ್‍ಗೆ ವರ್ಗಾವಣೆ ಮಾಡಲಾಗಿದ್ದು, ಆ ಹುದ್ದೆಯಲ್ಲಿದ್ದ ಜಿ.ಕಲ್ಪನಾ ಅವರನ್ನು ಎತ್ತಂಗಡಿ ಮಾಡಲಾಗಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾಗಿದ್ದ ಶಿಖಾ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ಡಾ.ಪಿ.ಸಿ.ಜಾಫರ್ ಅವರನ್ನು ನೇಮಿಸಲಾಗಿದೆ.
ವರ್ಗಾವಣೆಗೊಂಡ ಅಧಿಕಾರಿಗಳ ವಿವರ:
ವಿ. ಮಂಜುಳಾ – ಅಪರ ಮುಖ್ಯ ಕಾರ್ಯದರ್ಶಿ, ಡಿಪಿಎಆರ್
ಶಾಲಿನಿ ರಜನೀಶ್ – ಪ್ರ.ಕಾರ್ಯದರ್ಶಿ, ಯೋಜನೆ, ಕಾರ್ಯಕ್ರಮ ನಿರ್ವಹಣೆ, ಸಾಂಖಿಕ ಇಲಾಖೆ
ಜಿ.ಕುಮಾರ್‍ನಾಯಕ್ – ಪ್ರಧಾನ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ
ಉಮಾಶಂಕರ್ – ಪ್ರಧಾನ ಕಾರ್ಯದರ್ಶಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ
ವಿ.ಪೆÇನ್ನರಾಜು – ವ್ಯವಸ್ಥಾಪಕ ನಿರ್ದೇಶಕ, ಕೆಪಿಟಿಸಿಎಲ್
ಶಿವಯೋಗಿ ಸಿ. ಕಳಸದ್ – ವ್ಯವಸ್ಥಾಪಕ ನಿರ್ದೇಶಕ, ಕೆಎಸ್‍ಆರ್‍ಟಿಸಿ,
ಜೊತೆಗೆ ಬೆಂಗಳೂರು ಪ್ರಾದೇಶಿಕಆಯುಕ್ತರ ಹುದ್ದೆಯ ಹೆಚ್ಚುವರಿ ಹೊಣೆ.
ಎನ್.ವಿ.ಪ್ರಸಾದ್ – ವ್ಯವಸ್ಥಾಪಕ ನಿರ್ದೇಶಕರು, ಬಿಎಂಟಿಸಿ
ಬಿ.ರಣದೀಪ್ – ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ
ಎಚ್.ಎನ್.ಗೋಪಾಲಕೃಷ್ಣ – ವ್ಯವಸ್ಥಾಪಕ ನಿರ್ದೇಶಕರು, ಚೆಸ್ಕಾಂ, ಮೈಸೂರು
ವಸಂತಕುಮಾರ್ – ಆಯುಕ್ತರು, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ
ಡಾ.ಪಿ.ಸಿ.ಜಾಫರ್ – ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ