ನವದೆಹಲಿ: ದೇಶದ ಆರ್ಥಿಕ ಅಭಿವೃದ್ಧಿ ದರ(ಜಿಡಿಪಿ) ಎರಡನೇ ತ್ರೈಮಾಸಿಕ ಅವಧಿಯಲ್ಲಿ ಶೇ.7.1ಕ್ಕೆ ಕುಸಿದಿರುವುದು ಸರ್ಕಾರದ ಅಂಕಿ ಅಂಶಗಳಿಂದ ತಿಳಿದು ಬಂದಿದೆ.
ಮೊದಲ ತ್ರೈಮಾಸಿಕ ಅವಧಿಯಲ್ಲಿ ಶೇ.8.2 ರಷ್ಟಿದ್ದ ಜಿಡಿಪಿ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಶೇ,7.1 ಕ್ಕೆ ಕುಸಿದಿದೆ.
ಸಿಎಸ್ ಒ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಜೂನ್ ತ್ರೈಮಾಸಿಕ ಅವಧಿಯಲ್ಲಿ ಶೇ 8.2ರಷ್ಟು ಬೆಳವಣಿಗೆ ಕಂಡಿದ್ದ ಜಿಡಿಪಿ, ಈಗ ಜುಲೈ- ಸೆಪ್ಟೆಂಬರ್ ಅವಧಿಯಲ್ಲಿ 7.1 ರಷ್ಟು ಮಾತ್ರ ಬೆಳವಣಿಗೆ ಹೊಂದಿದೆ.
ಸ್ಥಿರ ಜಿಡಿಪಿಯು (2011-12)ಯು 2018-19ರ ಎರಡನೇ ತ್ರೈಮಾಸಿಕದಲ್ಲಿ ರು. 33.98 ಲಕ್ಷ ಕೋಟಿ ರು. ಆದರೆ ಕಳೆದ ವರ್ಷ ಇದೇ ಅವಧಿಯಲ್ಲಿ ಅದು 31.72 ಲಕ್ಷ ಕೋಟಿ ರುಪಾಯಿಗಳಾಗಿತ್ತು ಎಂದು ಸಿಎಸ್ ಒ ತಿಳಿಸಿದೆ.