ಮುಂಬೈ: ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಲು ನಿರ್ಧರಿಸಿದ ಬೆನ್ನಲ್ಲೇ, ಮೀಸಲಾತಿ ಬೇಕು ಎಂದು ಎಐಎಂಐಎಂ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದೆ.
ಮರಾಠರಿಗೆ ಮೀಸಲಾತಿ ನೀಡುತ್ತಿರುವುದನ್ನು ನಾವು ಪ್ರಶ್ನಿಸುವುದಿಲ್ಲ. ಆದರೆ ಮುಸ್ಲಿಮರಿಗೂ ಮೀಸಲಾತಿ ಬೇಕು ಎಂದು ಎಐಎಂಐಎಂ ಮುಖಂಡ ಇಮ್ತಿಯಾಜ್ ಜಲಿಲ್ ಅವರು ಎಎನ್ ಐಗೆ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸಹ ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ
ಮರಾಠ ಸಮುದಾಯದಂತೆಯೇ ನಮ್ಮಲ್ಲಿಯೂ ಬಡತನವಿದೆ. ಮುಸ್ಲಿಮರು ಹಲವು ವರ್ಷಗಳಿಂದ ಕಡು ಬಡತನದಲ್ಲಿ ಬದುಕುತ್ತಿದ್ದಾರೆ. ನಮ್ಮ ಸಮುದಾಯದ ಅಭಿವೃದ್ದಿಗಾಗಿ ವಿಶೇಷ ಮೀಸಲಾತಿ ಸೌಲಭ್ಯ ನೀಡಬೇಕು. ಮೀಸಲಾತಿಗೆ ನಮ್ಮ ಇಡೀ ಸಮುದಾಯ ಅರ್ಹವಾಗಿದೆ. ಇತರೆ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಿದಂತೆಯೇ, ನಮಗೂ ಪ್ರಾಮುಖ್ಯತೆ ನೀದಬೇಕು ಎಂದು ಓವೈಸಿ ಒತ್ತಾಯಿಸಿದ್ದಾರೆ.
ನ.29ರಂದು ಮಹಾರಾಷ್ಟ್ರ ಸರ್ಕಾರ ಮರಾಠರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ.16 ಮೀಸಲಾತಿ ನೀಡುವ ಮಸೂದೆಯನ್ನು ವಿಧಾನಸಭೆಯಲ್ಲಿ ಆಂಗೀಕರಿಸಿತ್ತು.
Muslim reservation,AIMIM,Asaduddin owaisi, Bombay high court