ಸರ್ಕಸ್ ಕಂಪನಿಗಳಲ್ಲಿ ಪ್ರಾಣಿಗಳ ಬಳಕೆಗೆ ನಿಷೇಧಿಸಲು ಚಿಂತನೆ

ನವದೆಹಲಿ: ದೇಶದಾದ್ಯಂತ ಎಲ್ಲಾ ಸರ್ಕಸ್ ಕಂಪನಿಗಳಲ್ಲಿ ಪ್ರಾಣಿಗಳ ಬಳಕೆ ಮೇಲೆ ನಿಷೇಧ ಹೇರಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ.

ಪ್ರಾಣಿಗಳ ಮೇಲಿನ ಹಿಂಸಾಚಾರವನ್ನು ತಡೆಯುವ ನಿಟ್ಟಿನಲ್ಲಿ ಪ್ರಸ್ತುತ ದೇಶದಲ್ಲಿ ಹುಲಿ, ಸಿಂಹಗಳನ್ನು ಸರ್ಕಸ್ ಗಳಲ್ಲಿ ಬಳಸಿಕೊಳ್ಳುವಂತಿಲ್ಲ ಎಂಬ ಕಾನೂನು ಇದೆ. ಇನ್ನು ಮುಂದಿನ ದಿನಗಳಲ್ಲಿ ಕುದುರೆ, ಆನೆ, ನಾಯಿ, ಕೋತಿ ಸೇರಿದಂತೆ ಇತರೆ ಪ್ರಾಣಿಗಳನ್ನೂ ಕೂಡ ಸರ್ಕಸ್ ಕಂಪನಿಗಳಲ್ಲಿ ಬಳಸುವುದನ್ನು ನಿಷೇಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ಈ ಕುರಿತಾದ ಪ್ರಸ್ತಾವನೆಯನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಲಾದ ಪ್ರಾಣಿಗಳ ಪ್ರದರ್ಶನ ನೋಂದಣಿ ತಿದ್ದುಪಡಿ ನಿಯಮಗಳು-2018ರ ಕರಡು ಮಸೂದೆಯಲ್ಲಿ ಸೇರಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

Animals, Circuses, Centre govt, Ban

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ