ಗೌಡರ ಕುಡಿ ಪ್ರಜ್ವಲ್ ರೇವಣ್ಣ ಹೆಗಲಿಗೆ ಹಾಸನ ಕ್ಷೇತ್ರದ ಜೆಡಿಎಸ್​ ಉಸ್ತುವಾರಿ ಜವಾಬ್ದಾರಿ?

ಹಾಸನ: ಹಾಸನ ಕ್ಷೇತ್ರದ ಮಾಜಿ ಶಾಸಕ ಹಾಗೂ ಜೆಡಿಎಸ್​ ಮುಖಂಡ ಎಚ್.ಎಸ್. ಪ್ರಕಾಶ್ ನಿಧನದಿಂದಾಗಿ ಹಾಸ‌ನ ಕ್ಷೇತ್ರಕ್ಕೆ ಜೆಡಿಎಸ್​ನಲ್ಲಿ ಉತ್ತರಾಧಿಕಾರಿಯೇ ಇಲ್ಲದಂತಾಗಿದೆ. ಅವರ ನಿಧನದಿಂದ ತೆರವಾಗಿರುವ ಸ್ಥಾನವನ್ನು, ಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ನೀಡಲಾಗಿದೆ. ಇದರೊಂದಿಗೆ ಹಲವು ದಿನಗಳಿಂದ ಚರ್ಚೆಯಲ್ಲಿರುವ ರೇವಣ್ಣ ಅವರ ಪುತ್ರನ ರಾಜಕೀಯ ಪ್ರವೇಶ ಮತ್ತು ಚುನಾವಣೆಯಲ್ಲಿ ಸ್ಪರ್ಧೆ ವಿಚಾರ ಒಂದು ಹಂತಕ್ಕೆ ಸ್ಪಷ್ಟಗೊಂಡಿದೆ. ಈಗಾಗಲೇ ಜೆಡಿಎಸ್​ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಪ್ರಜ್ವಲ್​ ಮುಂದಿನ ದಿನಗಳಲ್ಲಿ ಹಾಸನ ಕ್ಷೇತ್ರದ ಉಸ್ತುವಾರಿಯನ್ನು ನಿಭಾಯಿಸಲಿದ್ದಾರೆ.

ಹಾಸನ ಕ್ಷೇತ್ರದ ಮಾಜಿ ಶಾಸಕ ಎಚ್​.ಎಸ್. ಪ್ರಕಾಶ್ ನಿಧನದಿಂದ ತೆರವಾಗಿರುವ ಕ್ಷೇತ್ರ ಉಸ್ತುವಾರಿ ವಹಿಸಿಕೊಳ್ಳಲು ಮೊಮ್ಮಗನಿಗೆ ದೇವೇಗೌಡರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅದರಂತೆ ಪ್ರಜ್ವಲ್ ರೇವಣ್ಣಗೆ ಹಾಸನ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡು, ಹಾಸನ ಕ್ಷೇತ್ರದ ಮೂಲಕ ರಾಜಕೀಯಕ್ಕೆ ಪ್ರವೇಶ ಕೊಡಲು ಸಿದ್ಧರಾಗುತ್ತಿದ್ದಾರೆ ಎಂದು  ಬಲ್ಲ ಮೂಲಗಳು ತಿಳಿಸಿವೆ.

ಈಗಾಗಲೇ ಹಾಸನದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದರಿಂದ ಜೆಡಿಎಸ್​ ಸಂಘಟನೆ ಕುಸಿದಿದೆ. ಪ್ರಜ್ವಲ್ ರೇವಣ್ಣ ಅವರಿಗೆ ಈ ಕ್ಷೇತ್ರದ ಜವಾಬ್ದಾರಿ ನೀಡಿ, ಸಂಘಟನೆ ಒತ್ತು ನೀಡುವುದರಿಂದ ಮುಂದಿನ ಲೋಕಸಭಾ ಚುನಾವಣೆಗೆ ಅನುಕೂಲ ವಾತಾವರಣ ಸೃಷ್ಟಿಸಲು ಮೊಮ್ಮಗನಿಗೆ ದೇವೇಗೌಡರು ಹಾಸನ ಕ್ಷೇತ್ರದ ಹೊಣೆ ನೀಡಿದ್ದಾರೆ ಎನ್ನಲಾಗುತ್ತಿದೆ.

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ