ಬೆಂಗಳೂರು, ಡಿ.1-ಉಪಮೇಯರ್ ಅಭ್ಯರ್ಥಿ ಆಯ್ಕೆ ಸಂಬಂಧ ಇಂದು ಜೆಡಿಎಸ್ ನಾಯಕರು ಸಭೆ ನಡೆಸಿ ಚರ್ಚಿಸಿದರು.
ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ, ಶಾಸಕ ಗೋಪಾಲಯ್ಯ, ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ರಮೇಶ್ಗೌಡ, ಬೆಂಗಳೂರು ಮಹಾನಗರ ಜೆಡಿಎಸ್ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಹಾಗೂ ಪಾಲಿಕೆ ಜೆಡಿಎಸ್ ಸದಸ್ಯರಾದ ಹೇಮಲತಾ, ಮಹದೇವು, ಭದ್ರೇಗೌಡ ಮತ್ತಿತರರು ಸದಸ್ಯರು ಪಾಲ್ಗೊಂಡಿದ್ದರು.
ಡಿ.5 ರಂದು ನಡೆಯಲಿರುವ ಉಪಮೇಯರ್ ಅಭ್ಯರ್ಥಿ ಆಯ್ಕೆ ಹಾಗೂ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ಬಗ್ಗೆಯೂ ಇಂದು ನಡೆದ ಸಭೆಯಲ್ಲಿ ಚರ್ಚಿಸಲಾಯಿತು. ಉಪಮೇಯರ್ ರಮೀಳಾ ಉಮಾಶಂಕರ್ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ಸಂಬಂಧ ಚರ್ಚೆ ನಡೆಯುತ್ತಿದ್ದು, ಇಲ್ಲಿ ಚರ್ಚಿಸಿದ ನಂತರ ಜೆಡಿಎಸ್ ಪಕ್ಷದ ವರಿಷ್ಠರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.