ಎಂ.ಎಂ.ಕಲ್ಬುರ್ಗಿ ಪ್ರಕರಣ ವಿಶೇಷ ತನಿಖಾ ತಂಡ

ಬೆಂಗಳೂರು,ಡಿ.1-ಧಾರವಾಡದ ಸಂಶೋಧಕ ಹಾಗೂ ಹಿರಿಯ ಸಾಹಿತಿ ಡಾ. ಎಂ.ಎಂ.ಕಲ್ಬುರ್ಗಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ವಿಶೇಷ ತನಿಖಾ ತಂಡ ರಚನೆಗೆ ಸಿದ್ದತೆ ನಡೆಸಲಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ ಪಟ್ಟಿ ಹಾಗೂ ವಿವರಗಳೊಂದಿಗೆ ಡಿಜಿ ಹಾಗೂ ಐಜಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಸಮಾಲೋಚನೆ ನಡೆಸುತ್ತಿದೆ ಎನ್ನಲಾಗಿದೆ.

ವಿಶೇಷ ತನಿಖಾ ತಂಡದಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಸೇರಿದಂತೆ ಇತರೆ ಪ್ರಮುಖ ಅಧಿಕಾರಿಗಳನ್ನು ಸೇರಿಸಲಾಗಿದೆ.

ಕಲ್ಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆ ಬಗ್ಗೆ ಸುಪ್ರೀಂಕೋರ್ಟ್, ಸರ್ಕಾರ ಹಾಗೂ ತನಿಖಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ ಈ ಪ್ರಕರಣವನ್ನು ಎಸ್‍ಐಟಿಗೆ ವಹಿಸಲು ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

ಆಗಸ್ಟ್ 30 , 2015ರಂದು ಡಾ.ಎಂ.ಎಂ.ಕಲ್ಬುರ್ಗಿ ಅವರ ಹತ್ಯೆಯಾಗಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ