ನವದೆಹಲಿ: ಇಮ್ರಾನ್ ಖಾನ್ ಅವರ ಆಹ್ವಾನದ ಮೇರೆಗೆ ಪಾಕಿಸ್ತಾನಕ್ಕೆ ಹೋಗಿದ್ದೆ ಹೊರತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೂಚನೆ ಮೇರೆಗೆ ಹೋಗಿಲ್ಲ ಎಂದು ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.
ಯಾರ ಹೇಳಿಕೆಗಳನ್ನು ತಿರುಚುವ ಮೊದಲು ಸತ್ಯ ಏನೆಂಬುದನ್ನು ತಿಳಿದುಕೊಳ್ಳಬೇಕು. ರಾಹುಲ್ ಗಾಂಧಿ ನನ್ನನ್ನು ಪಾಕಿಸ್ತಾನಕ್ಕೆ ಹೋಗುವಂತೆ ಹೇಳಿಲ್ಲ. ಇಮ್ರಾನ್ ಖಾನ್ ಅವರ ವೈಯಕ್ತಿಕ ಆಹ್ವಾನದ ಮೇರೆಗೆ ಪಾಕಿಸ್ತಾನಕ್ಕೆ ಹೋಗಿದ್ದೆ. ಇದು ಇಡೀ ವಿಶ್ವಕ್ಕೆ ಗೊತ್ತಿದೆ ಎಂದು ಹೇಳಿದ್ದಾರೆ.
ನವೆಂಬರ್ 28ರಂದು ಸಿಧು ಪಾಕಿಸ್ತಾನ ಕರ್ತಾರ್ಪುರ ಸಾಹಿಬ್ ಕಾರಿಡಾರ್ನ ಶಂಕುಸ್ಥಾಪನೆ ಅಂಗವಾಗಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು. ಸಿಧು ಅವರ ಪಾಕ್ ಭೇಟಿಗೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿಧು, ತಮ್ಮ ಪಾಕ್ ಭೇಟಿಯನ್ನು ಸಮರ್ಥಿಸಿಕೊಂಡಿದ್ದರು. ಅಲ್ಲದೇ ರಾಹುಲ್ ಗಾಂಧಿ ಸೂಚನೆ ಮೇರೆಗೆ ಹೋಗಿದ್ದೆ ಎಂಬ ಹೇಳಿಕೆ ನೀಡಿದ್ದರು.
Rahul Ji Never Asked Me To Go To Pak, Navjot Sidhu