ನವದೆಹಲಿ: ಹರ್ಯಾಣದ ಪಂಚಕುಲದಲ್ಲಿ ಸಾಂಸ್ಥಿಕ ನಿವೇಶನ ಮರು ಮಂಜೂರಾತಿಯಲ್ಲಿ ನಡೆದಿದೆ ಎನ್ನಲಾದ ಭಾರಿ ಅವ್ಯವಹಾರ ಮತ್ತು ಅಕ್ರಮಗಳ ಸಂಬಂಧ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಮತ್ತು ಕಾಂಗ್ರೆಸ್ ನಾಯಕ ಮೋತಿಲಾಲ್ ವೋಡಾ ಅವರ ವಿರುದ್ಧ ಕೇಂದ್ರೀಯ ತನಿಖಾ ದಳ(ಸಿಬಿಐ) ದೋಷಾರೋಪ ಪಟ್ಟಿ ಸಲ್ಲಿಸಿದೆ.
ಕಾಂಗ್ರೆಸ್ ಪ್ರಭಾವಿ ನಾಯಕರ ಒಡೆತನದಲ್ಲಿರುವ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್)ಗೆ ಅಕ್ರಮವಾಗಿ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಸರ್ಕಾರಕ್ಕೆ 67 ಕೋಟಿ ರೂ.ಗಳ ನಷ್ಟವಾಗಿದೆ ಎಂದು ಸಿಬಿಐ ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿ ತಿಳಿಸಲಾಗಿದೆ.
ಈ ಅಕ್ರಮ-ಅವ್ಯವಹಾರಗಳಲ್ಲಿ ಹರ್ಯಾಣದ ಆಗಿನ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಹಾಗೂ ಎಜೆಎಲ್ನ ಆಗಿನ ಅಧ್ಯಕ್ಷ ಮೋತಿಲಾಲ್ ವೋರಾ ಅವರು ಶಾಮೀಲಾಗಿದ್ಧಾರೆ ಎಂದು ಸಿಬಿಐ ಆರೋಪಿಸಿದೆ.
CBI Files Chargesheet Against Ex-Haryana Chief Minister In Land Case