ಬುಲಂದಶಹರ್ ಹಿಂಸಾಚಾರದಲ್ಲಿ ಪೊಲೀಸ್ ಸೇರಿ ಇಬ್ಬರು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬುಲಂದಶಹರ್: ಬುಲಂದಶಹರ್ ನಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಹತ್ಯೆಯಾದ ಪೊಲೀಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ರೋಪಿಗಳನ್ನು ಬಂಧಿಸಲಾಗಿದೆ.

ಹತ್ಯೆಯಾದ ಪೊಲೀಸ್ ಅಧಿಕಾರಿಗೆ ಅಂತಿಮ ನಮನ ಸಲ್ಲಿಸಿದ ಬಳಿಕ ಪ್ರತಿಕ್ರಿಯೆ ನೀಡಿರುವ ಮೀರುತ್’ನ ಎಡಿಜಿ ಪ್ರಶಾಂತ್ ಕುಮಾರ್ ಅವರು, ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಸುಭೋಧ್ ಕುಮಾರ್ ಅವರ ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಇಬ್ಬರನ್ನು ಈಗಾಗಲೇ ಬಂಧನಕ್ಕೊಳಪಡಿಸಲಾಗಿದ್ದು, ಮತ್ತಷ್ಟು ಜನರನ್ನು ಶೀಘ್ರದಲ್ಲಿಯೇ ಬಂಧನಕ್ಕೊಳಪಡಿಸಲಾಗುತ್ತದೆ. ಈಗಾಗಲೇ ಸರ್ಕಾರ ಮೃತಪಟ್ಟಿರುವ ಪೊಲೀಸ್ ಅಧಿಕಾರಿಗೆ ರೂ.50 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಇಲ್ಲದೆ, ಅಧಿಕಾರಿಯ ಪತ್ನಿಗೆ ಪಿಂಚಣಿ ನೀಡುವುದಾಗಿಯೂ ತಿಳಿಸಿದೆ. ಅಧಿಕಾರಿಯ ಕುಟುಂಬಸ್ಥರೊಬ್ಬರಿಗೆ ಸರ್ಕಾರಿ ಉದ್ಯೋಗ ಕೊಡುವುದಾಗಿ ಭರವಸೆ ನೀಡಿದೆ ಎಂದು ತಿಳಿಸಿದ್ದಾರೆ.

ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಲಾಗಿದ್ದು, ಮೀರುತ್ ಐಜಿ ನೇತೃತ್ವದಲ್ಲಿ ತಂಡವನ್ನು ರಚಿಸಿ ತನಿಖೆ ಆರಂಭಿಸಲಾಗಿದೆ. ಈ ತಂಡ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಿದೆ. ಹಿಂಸಾಚಾರ ಹೇಗೆ ಸೃಷ್ಟಿಯಾಯಿತು. ಅಧಿಕಾರಿಯ ಜೊತೆಗೆ ಎಷ್ಟು ಜನರಿದ್ದರು. ಎಷ್ಟು ಜನ ಸ್ಥಳದಿಂದ ಓಡಿಹೋಗಿದ್ದರು ಎಂಬೆಲ್ಲಾ ಮಾಹಿತಿಗಳನ್ನು ಎಸ್ಐಟಿ ಕಲೆ ಹಾಕಲಿದೆ. ಎಫ್ಐಆರ್ ನಲ್ಲಿ 8 ಮಂದಿ ಹೆಸರೂ ಕೂಡ ಇದೆ. ಮಾಹಿತಿ ಕಲೆ ಹಾಕಿ ಶೀಘ್ರದಲ್ಲಿ ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗುತ್ತದೆ ಎಂದಿದ್ದಾರೆ.

ಉತ್ತರ ಪ್ರದೇಶದ ಬುಲಂದ್ ಶೆಹರ್ ನಲ್ಲಿ ಸೋಮವಾರ ಗೋಹತ್ಯೆ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಪೊಲೀಸ್‌ ಠಾಣೆ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಲಭೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಹಾಗೂ ಓರ್ವ ಯುವಕ ಮೃತಪಟ್ಟಿದ್ದರು. ಗ್ರಾಮದಲ್ಲಿ ಗೋಹತ್ಯೆ ನಡೆದಿದೆ ಎಂದು ಆರೋಪಿಸಿ ಸ್ಥಳೀಯರ ಗುಂಪೊಂದು ಪ್ರತಿಭಟನೆ ನಡೆಸುತ್ತಿತ್ತು.

ಗಲಭೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಸುಬೋಧ್​ ಕುಮಾರ್​ ಸಿಂಗ್ ಹಾಗೂ 20 ವರ್ಷದ ಯುವಕ ಸುಮಿತ್​ ಎಂಬುವವರು ಮೃತಪಟ್ಟಿದ್ದರು.

Uttar pradesh,Bulandshahr,one police, young man killed, two arrested

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ