ಶೈಕ್ಷಣಿಕ ಸಾಲವನ್ನು ಮನ್ನಾ ಮಾಡುವಂತೆ ದೆಹಲಿಯಲ್ಲಿ ಸತ್ಯಾಗ್ರಹ ನಡೆಸಲಿರುವ ಶಿಕ್ಷಕರ ವೇದಿಕೆ:

Varta Mitra News

ಬೆಂಗಳೂರು, ಡಿ.4-ಕಲಬುರಗಿ ಈಶಾನ್ಯ ವಲಯದ ಶಿಕ್ಷಕರ ವೇದಿಕೆ ವತಿಯಿಂದ ಉನ್ನತ ವ್ಯಾಸಂಗಕ್ಕಾಗಿ ಪಡೆದ ಶೈಕ್ಷಣಿಕ ಸಾಲವನ್ನು ಮನ್ನಾ ಮಾಡುವಂತೆ ಒತ್ತಾಯಿಸಿ ಡಿ.13 ರಂದು ದೆಹಲಿಯ ಜಂತರ್ ಮಂತರ್‍ನಲ್ಲಿ ಸತ್ಯಾಗ್ರಹವನ್ನು ನಡೆಸಲಾಗುವುದು ಎಂದು ವೇದಿಕೆಯ ಅಧ್ಯಕ್ಷ ಪೆÇ್ರ.ಎಂ.ಬಿ.ಹಂಬಲಗಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉನ್ನತ ವ್ಯಾಸಂಗಕ್ಕಾಗಿ ಪಡೆದ ಶೈಕ್ಷಣಿಕ ಸಾಲದ ಬಡ್ಡಿಯನ್ನು ತುಂಬುವುದಾಗಿ 2009 ಮತ್ತು 2014ರಲ್ಲಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಇಲ್ಲಿಯವರೆಗೂ ಖಾತೆಗೆ ಬಡ್ಡಿ ಹಣದ ಬಾರದೆ ಇರುವುದರಿಂದ ಬ್ಯಾಂಕ್‍ನವರು ಸಾಲ ತೀರಿಸುವಂತೆ ನೋಟೀಸ್ ನೀಡುವುದರ ಜೊತೆಗೆ ಮಾನಸಿಕ ಕಿರುಕುಳ ನೀಡುತ್ತಿರುವುದರಿಂದ ಸಾಲ ಪಡೆದವರು ಆತಂಕಕ್ಕೆ ಒಳಗಾಗಿದ್ದಾರೆ ಎಂದರು.

ವಿದ್ಯಾರ್ಥಿಗಳು ಸಾಲ ಪಡೆದು ವ್ಯಾಸಂಗ ಮುಗಿಸಿ ಉದ್ಯೋಗವಿಲ್ಲದೆ ಅಲೆದಾಡುತ್ತಿದ್ದಾರೆ.ಸಾಲ ಪಡೆದವರ ಶೈಕ್ಷಣಿಕ ಸಾಲವನ್ನು ಸಂಪೂರ್ಣ ಮನ್ನಾ ಮಾಡಿ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ಅಥವಾ ಉದ್ಯೋಗಕ್ಕಾಗಿ ಬಡ್ಡಿ ರಹಿತ ಸಾಲ ನೀಡಬೇಕೆಂದು ಹಲವಾರು ಸಚಿವರಿಗೆ ಮನವಿ ಮಾಡಿದ್ದೆವು. ಆದರೆ ಇಲ್ಲಿಯವರೆಗೂ ಯಾವುದೇ ರೀತಿಯ ಕ್ರಮ ಕೈಗೊಳ್ಳದೆ ಇರುವುದರಿಂದ ನಾವು ಡಿ.13 ರಂದು ದೆಹಲಿಯ ಜಂತರ್ ಮಂತರ್‍ನಲ್ಲಿ ಒಂದು ಸಾವಿರ ಪಾಲಕರೊಂದಿಗೆ ಸತ್ಯಾಗ್ರಹ ನಡೆಸಲಾಗುವುದು ಎಂದು ತಿಳಿಸಿದರು.

ಒಂದು ವೇಳೆ ಸತ್ಯಾಗ್ರಹಕ್ಕೂ ಪ್ರಧಾನಿ ಅವರು ಸ್ಪಂದಿಸದಿದ್ದರೆ ಅವರ ಮನೆ ಮುಂದೆ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.
ಸತ್ಯಾಗ್ರಹಕ್ಕೆ ಶೈಕ್ಷಣಿಕ ಸಾಲ ಪಡೆದ ವಿದ್ಯಾರ್ಥಿಗಳು, ಪಾಲಕರು ಸಾಲದ ಮಾಹಿತಿಯೊಂದಿಗೆ ಭಾಗವಹಿಸಲು ಕೋರಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ