ವಿಜಯ್ ನಗರ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಬೆದರಿಕೆಯೊಡಿದ್ದರೆ ಜೈಸ್ ಇ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಮೇಲೆ ಮುಂದಿನ ಸರ್ಜಿಕಲ್ ಸ್ಟ್ರೈಕ ನಡೆಸಬೇಕಾಗುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.
ರಾಜಸ್ತಾನ ವಿಧಾನಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಯೋಗಿ ಆದಿತ್ಯನಾಥ್, ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬಿಜೆಪಿ ಬದ್ಧವಾಗಿದೆ. ಒಂದು ವೇಳೆ ರಾಮ ಮಂದಿರ ನಿರ್ಮಾಣಕ್ಕೆ ಮಸೂದ್ ಅಜರ್ ಬೆದರಿಕೆಯೊಡಿದ್ದರೆ ಆತನ ಮೇಲೆಯೇ ಮುಂದಿನ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗುವುದು, ಅಲ್ಲದೇ, ಆತನ ಗುರು ಕೂಡ ಆತನನ್ನು ಉಳಿಸಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.
ಕಳೆದ ವಾರವಷ್ಟೇ ಜೆ ಎಂ ಮುಖ್ಯಸ್ಥ ಮಸೂದ್ ಅಜರ್, ರಾಮ ಮಂದಿರ ನಿರ್ಮಾಣವಾದರೆ ವ್ಯಾಪಕ ದಾಳಿ ನಡೆಸಲಾಗುವುದು ಎಂದು ಬೆದರಿಕೆಹಾಕಿದ್ದ. ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಯೋಗಿ ಆದಿತ್ಯನಾಥ್, ರಾಮ ಮಂದಿರ ನಿರ್ಮಾಣಕ್ಕೆ ಅಡ್ಡಿಯಾದರೆ ಎರಡನೇ ಸರ್ಜಿಕಲ್ ಸ್ಟ್ರೈಕ್ ನ್ನು ಮಸುದ್ ಅಜರ್ ಮೇಲೆ ನಡೆಸಬೇಕಾಗುತ್ತದೆ ಎಂದು ಎಚ್ಹ್ಚರಿಕೆ ನೀಡಿದ್ದಾರೆ.
Yogi Adityanath warns, surgical strike if Masood Azhar threatens, Ram Temple