ಬೆಂಗಳೂರು, ಡಿ.4- ರೆಬೆಲ್ ಸ್ಟಾರ್ ಅಂಬರೀಷ್ ಅವರ ಪುಣ್ಯಸ್ಮರಣೆ ಇಂದು ಕಂಠೀರವ ಸ್ಟುಡಿಯೋದಲ್ಲಿ ಪೂಜಾ ವಿಧಿ-ವಿಧಾನಗಳೊಂದಿಗೆ ನೆರವೇರಿತು.
ಬೆಳಗ್ಗೆ 8.30ಕ್ಕೆ ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಹಾಗೂ ಕುಟುಂಬದವರ ಜತೆ ಆತ್ಮೀಯರು ಸಹ ಪುಣ್ಯತಿಥಿಯಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರಿನ ವಿವಿಧ ಕಡೆಗಳಿಂದ ಹಾಗೂ ಮಂಡ್ಯ, ಮದ್ದೂರು, ಮಳವಳ್ಳಿಯಿಂದ ಸಾವಿರಾರು ಮಂದಿ ಅಭಿಮಾನಿಗಳು ಬೆಳ್ಳಂಬೆಳಗ್ಗೆಯೇ ಆಗಮಿಸಿ ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡಿದ್ದರು.