ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿ ತಮಿಳುನಾಡು ಪ್ರತಿಭಟನೆಗೆ ನಿರ್ಧಾರ

ಚೆನ್ನೈ: ಕರ್ನಾಟಕದ ಮಹತ್ವಾಕಾಂಕ್ಷೆ ಯೋಜನೆ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತಮಿಳುನಾಡು ಇದೀಗ ಕೇಂದ್ರ ಸರಕಾರದ ನಿರ್ಧಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ.

ಡಿಎಂಕೆ ಹಾಗೂ ಇನ್ನಿತರ ಪಕ್ಷಗಳು ಯೋಜನೆಗೆ ಪ್ರಾರ್ಥಮಿಕ ಅನುಮತಿ ನೀಡಿದ ಆಯೋಗದ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಈ ಸಂಬಂಧ ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್‌, ಸರ್ವ ಪಕ್ಷ ಸಭೆ ಕರೆದಿದ್ದು, ಬೃಹತ್ ಪ್ರತಿಭಟನೆ ನಡೆಸುವುದಾಗಿ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಕರ್ನಾಟಕಕ್ಕೆ ನೀಡಿರುವ ಅನುಮತಿಯನ್ನು ಕೂಡಲೇ ರದ್ದು ಪಡಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಯಾವುದೇ ನೀರಾವರಿ, ಜಲಾಶಯ ಯೋಜನೆಗಳನ್ನು ಅನುಷ್ಠಾನ ಮಾಡಬೇಕಾದಲ್ಲಿ, ಕೆಳ ರಾಜ್ಯದೊಂದಿಗೂ ಅಗತ್ಯ ಮಾತುಕತೆ ನಡೆಸಬೇಕು. ಒಂದು ರಾಜ್ಯ ಏಕಾಏಕಿ ಯೋಜನೆ ಜಾರಿಗೊಳಿಸುವಂತಿಲ್ಲ ಎಂದು ತಮಿಳುನಾಡು ಕ್ಯಾತೆ ತೆಗೆದಿದೆ.

ಈ ಸಂಬಂಧ ಮೇಕೆದಾಟು ಯೋಜನೆ ಹಾಗೂ ತಮಿಳುನಾಡಿಗೆ ಕಾವೇರಿ ನೀರು ಬಿಡಬೇಕಾದ ಪ್ರಮಾಣಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ರಾಜ್ಯದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Mekedatu project,Tamil Nadu,DMK president MK Stalin,protest

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ