ಲಖನೌ: ಅಕ್ರಮ ಕಸಾಯಿಖಾನೆ ವಿರುದ್ಧ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಇನ್ಸ್ಪೆಕ್ಟರ್ವೋರ್ವರನ್ನು ಬಲಿಪಡೆದ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ಈ ಬಗ್ಗೆ ದೃಢ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಪ್ರಕರಣ ಸಂಬಂಧ ಪ್ರಧಾನ ಕಾರ್ಯದರ್ಶಿ, ಡಿಜಿಪಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಎಡಿಜಿಪಿ ಅವರೊಂದಿಗೆ ಮಂಗಳವಾರ ರಾತ್ರಿ ಸಭೆ ನಡೆಸಿದ ಅವರು, ಗೋ ಹತ್ಯೆ ಮಾಡುವವರನ್ನು ನಿರ್ದಾಕ್ಷಿಣ್ಯವಾಗಿ ಬಂಧಿಸಿ ಎಂದು ಪೊಲೀಸರಿಗೆ ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಮೂಲಕ ಮಾಹಿತಿ ನೀಡಿರುವ ಯೋಗಿ, ಗೋ ಹಂತಕರ ವಿರುದ್ಧ ಕಠಿಣ ಕ್ರಮ ತೆಗದುಕೊಳ್ಳುವ ಜರೂರಿದೆ. ಈ ಸಂಬಂಧ ಯಾವುದೇ ಚಟುವಟಿಕೆಯಲ್ಲಿ ತೊಡಗಿರುವ ಮಂದಿಯನ್ನು ನಿರ್ದಾಕ್ಷಿಣ್ಯವಾಗಿ ಬಂಧಿಸುವುದಾಗಿ ಹೇಳಿದ್ದಾರೆ. ಇನ್ಸ್ಪೆಕ್ಟರ್ ಹತ್ಯೆ ಕುರಿತಾಗಿ ಸೂಕ್ತ ತನಿಖೆ ನಡೆಸಿ ಎಂದೂ ಸೂಚಿಸಿದ್ದಾರೆ.