ಅಗರ್ತಲಾ, ಡಿ.5- ಬಸ್ಸೊಂದು ಕಂದಕ್ಕೆ ಉರುಳಿ ಬಿದ್ದು 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ದುರ್ಘಟನೆ ಈಶಾನ್ಯ ರಾಜ್ಯ ತ್ರಿಪುರದ ಧಲೈ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.
ತ್ರಿಪುರ ರಾಜಧಾನಿ ಅಗರ್ತಲಾಕ್ಕೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಧಲೈ ಜಿಲ್ಲೆಯ ಗಂಡಚರ ಅಮರ್‍ಪುರ್ ರಸ್ತೆಯಲ್ಲಿ ಕಮರಿಗೆ ಉರುಳಿ ಬಿತ್ತು.
ಪೆÇಲೀಸರು ಮತ್ತು ಸ್ಥಳೀಯರು ಬಸ್ಸಿನಲ್ಲಿದ್ದ ಎಲ್ಲ ಪ್ರಯಾಣಿಕರನ್ನು ರಕ್ಷಿಸಿದರು. ಈ ದುರ್ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ.
ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಮತ್ತು ಉನ್ನತಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿ ಸಾಂತ್ವನಾ ಹೇಳಿದರು.