ಬೆಂಗಳೂರು, ಡಿ.5-ಜೆಡಿಎಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಯಿತು.
ವೆಂಕಟಪ್ಪ ನಾಯಕ್ ಅವರ ನೇತೃತ್ವದಲ್ಲಿ ಅವರ ಅಭಿಮಾನಿಗಳು, ಬೆಂಬಲಿಗರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಸಚಿವ ಸ್ಥಾನ ನೀಡುವಂತೆ ಕೋರಿದರು.
ವಾಲ್ಮೀಕಿ ಸಮುದಾಯಕ್ಕೆ ಸೇರಿದ ಜೆಡಿಎಸ್ನ ನಾಯಕರಾಗಿದ್ದಾರೆ. ಇವರನ್ನು ಸಚಿವರನ್ನಾಗಿ ಮಾಡುವುದರಿಂದ ಹೈದರಾಬಾದ್-ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟನೆ ಹಾಗೂ ಸಮುದಾಯದ ಸಂಘಟನೆಗೆ ಇದರಿಂದ ಹೆಚ್ಚು ಅನುಕೂಲವಾಗಲಿದೆ ಎಂದು ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪರಿಶೀಲಿಸುವ ಭರವಸೆ ನೀಡಿದರು.