ನವದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಐದು ಪ್ರಕರಣಗಳನ್ನು ವಜಾಗೊಳಿಸಿ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶ ನೀಡಿದೆ.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅಕ್ರಮ ಡಿನೋಟಿಫಿಕೇಷನ್ ಮಾಡಿದ್ದಾರೆಂದು ಆರೋಪಿಸಿ ವಕೀಲ, ಸಾಮಾಜಿಕ ಕಾರ್ಯಕರ್ತ ಸಿರಾಜಿನ್ ಬಾಷಾ ಹೈಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಹೈಕೋರ್ಟ್ ಯಡಿಯೂರಪ್ಪ ಅವರನ್ನು ನಿರಪರಾಧಿ ಎಂದಿತ್ತು. ಆದರೆ ಬಾಷಾ ಮತ್ತೆ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಈ ಸಂಬಂಧ ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಐದು ಕೇಸ್‌ಗಳನ್ನು ವಜಾಗೊಳಿಸಿದೆ. ವಜಾಗೊಂಡಿರುವ ಬಗ್ಗೆ ಬಿಜೆಪಿ ಕರ್ನಾಟಕ ಟ್ವೀಟ್ ಮಾಡಿದ್ದು, ”ಸತ್ಯಕ್ಕೆ ಸಾವಿಲ್ಲ ಸುಳ್ಳಿಗೆ ಉಳಿಗಾಲವಿಲ್ಲ” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.