
ಬೆಂಗಳೂರು, ಡಿ.6- ನಾಡಿನ ನೆಲಜಲದ ವಿಚಾರದಲ್ಲಿ ರಾಜಕೀಯ ಮಾಡದೇ ಒಗ್ಗಟ್ಟಿನಿಂದ ಇರುತ್ತೇವೆ ಬಂದು ಮಾಜಿ ಜಲಸಂಪನ್ಮೂಲ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೃಷಿ ಕಾವೇರಿ ಜಲನಯನ ಭಾಗದ ಸದ್ಬಳಕೆ ಅಂತಾರಾಜ್ಯ ನದಿ ವಿವಾದಗಳಿಗೆ ಸಂಬಂಧಿಸಿದ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕೇಂದ್ರದಲ್ಲಿ ಯಾವುದೇ ಸರ್ಕಾರವಿದ್ದರೂ ಕಾವೇರಿ, ಕೃಷ್ಣ, ಮಹದಾಯಿ, ಮೇಕೆದಾಟು ಯಾವುದೇ ಯೋಜನೆ ವಿಚಾರದಲ್ಲಿ ರಾಜ್ಯದ ಹಿತ ಕಾಪಾಡಲು ಬದ್ಧ ಎಂದರು.
ನೀರಾವರಿ ಯೋಜನೆಗಳು ಕಾಲ ಮಿತಿಯಲ್ಲಿ ಪೂರ್ಣಗೊಳ್ಳಬೇಕು.ಸಭೆಯಲ್ಲಿ ವ್ಯಕ್ತವಾಗುವ ಸಲಹೆ ಸೂಚನೆಗಳನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು.ಕಾಟಾಚಾರದ ಸಭೆಯಾಗಬಾರದು ಎಂದರು.