
ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳು ಕಳೆದಿದೆ. ಇಷ್ಟು ದಿನವಾದರೂ ಒಮ್ಮೆ ಕೂಡ ಸುದ್ದಿಗೋಷ್ಠಿ ನಡೆಸಿ, ಜನರ ಪ್ರಶ್ನೆಗಳಿಗೆ ನೇರ ಉತ್ತರ ನೀಡಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ಮುಂದುವರೆಸಿದ್ದಾರೆ.
ಹೈದರಾಬಾದ್ನಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದು 1654 ದಿನಗಳಾಗಿವೆ. ಈ ವರೆಗೆ ಅವರು ಒಂದೇ ಒಂದು ಸುದ್ದಿಗೋಷ್ಠಿ ನಡೆಸಿಲ್ಲ. ಸಾಧ್ಯವಾದರೆ ಒಂದು ಸುದ್ದಿಗೋಷ್ಠಿ ನಡೆಸಿ, ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಲಿ ಎಂದು ಸವಾಲು ಹಾಕಿದರು.
ಈ ಹಿಂದೆ ಬಿಜೆಪಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಸೈಲೆಂಟ್ ಪ್ರಧಾನಿ ಎಂದು ಲೇವಡಿ ಮಾಡುತ್ತಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಹುಲ್ ಇದೀಗ ಮೋದಿ ಅವರಿಗೆ ಸವಾಲು ಹಾಕಿದ್ದಾರೆ.
telangana election,rahul gandhi,PM Modi