ನವದೆಹಲಿ: ತಮ್ಮನ್ನು ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಲು ನಡೆಯುತ್ತಿರುವ ಪ್ರಕ್ರಿಯೆ ವಿರುದ್ಧ ಉದ್ಯಮಿ ವಿಜಯ್ ಮಲ್ಯ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ನೊಟೀಸ್ ಜಾರಿ ಮಾಡಿದೆ.
ಮಲ್ಯ ಅವರನ್ನು ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೊಷಿಸುವುದಕ್ಕೆ ಮುಂಬೈ ಕೋರ್ಟ್ ನಲ್ಲಿ ಪ್ರಕ್ರಿಯೆಗಳು ಚಾಲನೆಯಲ್ಲಿವೆ. ಈ ಪ್ರಕ್ರಿಯೆಯನ್ನು ಪ್ರಶ್ನಿಸಿ ವಿಜಯ್ ಮಲ್ಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮಲ್ಯ ಅರ್ಜಿ ವಿಚಾರಾಣೆ ನಡೆಸಿದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾ. ರಂಜನ್ ಗೊಗೋಯ್, ನ್ಯಾ. ಎಸ್.ಕೆ ಕೌಲ್ ಅವರಿದ್ದ ವಿಭಾಗೀಯ ಪೀಠ, ಮಲ್ಯ ಅರ್ಜಿ ಕುರಿತು ಇ.ಡಿ ಪ್ರತಿಕ್ರಿಯೆ ಕೇಳಿದೆ.
ಆರ್ಥಿಕ ಅಪರಾಧಗಳ ಕಾಯ್ದೆ 2018 ರ ಅಡಿಯಲ್ಲಿ ಮಲ್ಯ ಅವರನ್ನು ದೇಶದಿಂದ ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಲು ಇಡಿ ವಿಶೇಷ ನ್ಯಾಯಾಲಯದ ಮೊರೆ ಹೋಗಿತ್ತು. ಈಗ ಸುಪ್ರೀಂ ಕೋರ್ಟ್ ಇಡಿ ಪ್ರತಿಕ್ರಿಯೆ ಕೇಳಿದೆ ಆದರೆ ಮುಂಬೈ ಕೋರ್ಟ್ ನಲ್ಲಿ ನಡೆಯುತ್ತಿರುವ ಪ್ರಕ್ರಿಯೆಗಳಿಗೆ ತಡೆ ನೀಡಲು ನಿರಾಕರಿಸಿದೆ.
Supreme Court,issued notice,Enforcement Directorate (ED),Vijay Mallya