ಜೈಪುರ: ರಾಜಸ್ತಾನದ 199 ವಿಧಾನಸಭಾ ಸ್ಥಾನಗಳಿಗೆ ಬೆಳಗ್ಗೆ 8 ಗಂಟೆಯಿಂದ ಮತದಾನ ಆರಂಭವಾಗಿದೆ. 2ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಬಾರಿ ಕಣಕ್ಕಿಳಿದಿದ್ದಾರೆ. ಆಡಳಿತಾರೂಢ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆಯೇ ಅಥವಾ ಕಾಂಗ್ರೆಸ್ ಅಧಿಕಾರ ಪಡೆಯುತ್ತದೆಯೇ ಎಂಬುದು ಇಂದಿನ ಮತದಾನದಲ್ಲಿ ನಿರ್ಧಾರವಾಗಲಿದೆ.
ರಾಜ್ಯದ 51,687 ಮತಗಟ್ಟೆಗಳಲ್ಲಿ ಮತದಾನ ಆರಂಭವಾಗಿದ್ದು, 259 ಮಂದಿ ಮಹಿಳಾ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಇದ್ದಾರೆ.
130 ಸೀಟುಗಳಿಗೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ವಸುಂಧರಾ ರಾಜೆ ಮತ್ತೆ ಮುಖ್ಯಮಂತ್ರಿಯಾಗುವ ಭರವಸೆ ಹೊಂದಿದ್ದರೆ, ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಸಿಎಂ ಪದವಿ ಗಿಟ್ಟಿಸಿಕೊಳ್ಳುವ ಯತ್ನ ನಡೆಸಿದ್ದಾರೆ.
Rajasthan Assembly Election,votting