ಚಿಕ್ಕಮಗಳೂರು: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಸಣ್ಣಮಟ್ಟದ ಬದಲಾವಣೆ ಆಗಿದೆ. ನಿನ್ನೆ ಹಲವಾರು ತಜ್ಞ ವೈದ್ಯರು ಶ್ರೀಗಳ ಆರೋಗ್ಯ ಪರಿಶೀಲನೆ ನಡೆಸಿದ್ದಾರೆ. ಹೆಚ್ಚುವರಿ ಚಿಕಿತ್ಸೆಗಾಗಿ ಚೆನ್ನೈಗೆ ಕರೆದುಕೊಂಡು ಹೋಗಲು ತೀರ್ಮಾನಿದ್ದಾರೆ. ಸರ್ಕಾರದ ವೆಚ್ಚದಲ್ಲೇ ಎಲ್ಲಾ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಮುಖ್ಯ ಕಾರ್ಯದರ್ಶಿಗಳಿಗೆ ನಾನು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಡಾ. ಶಿವಕುಮಾರ ಸ್ವಾಮಿಜೀ ಆರೋಗ್ಯ ಕುರಿತು ಶೃಂಗೇರಿಯಲ್ಲಿ ಮಾತನಾಡಿದ ಅವರು, ಶ್ರೀಗಳ ಆರೋಗ್ಯದ ಬಗ್ಗೆ ಜನರಿಗೆ ಆತಂಕ ಬೇಡ. ಅವರ ಆರೋಗ್ಯ ಸಂಬಂಧ ಪಿನ್ ಟು ಪಿನ್ ಮಾಹಿತಿ ತರಿಸಿಕೊಳ್ತಿದ್ದೇನೆ. ಮಠದ ಕಿರಿಯ ಸ್ವಾಮೀಜಿ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಅವರ ಆರೋಗ್ಯದಲ್ಲಿ ಸಣ್ಣಮಟ್ಟದ ಏರುಪೇರಾಗಿದೆ. ಹೆಚ್ಚಿನ ಚಿಕಿತ್ಸೆಗೆ ಚೆನ್ನೈ ಆಸ್ಪತ್ರೆಗೆ ಕರೆದುಕೊಂಡು ಹೋಗಲು ತೀರ್ಮಾನ ಮಾಡಲಾಗಿದೆ. ನಾನು ನಿನ್ನೆಯೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ. ಹಲವಾರು ವೈದ್ಯ ತಜ್ಞರ ತಂಡದಿಂದ ಸ್ವಾಮೀಜಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಿದರು.