ವಿಶ್ವ ವಿದ್ಯಾಲಯದ ಕಾರ್ಯಕ್ರಮದ ವೇಳೆ ಕುಸಿದುಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಅಹಮದ್ ನಗರ: ಮಹಾರಾಷ್ಟ್ರದಲ್ಲಿ ನಡೆದ ವಿಶ್ವವಿದ್ಯಾನಿಲಯದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆ ಹಾಡುತ್ತಿದ್ದ ವೇಳೆ ಕೇಂದ್ರ ಹೆದ್ದಾರಿ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಹಠಾತ್ತನೆ ಕುಸಿದು ಬಿದ್ದ ಘಟನೆ ನಡೆದಿದೆ.

ಅಹಮದ್ ನಗರದ ರಹುರಿಯಲ್ಲಿರುವ ಮಹಾತ್ಮ ಫುಲೆ ಕೃಷಿ ವಿದ್ಯಾಪೀಠ (ಎಂಪಿಕೆವಿ) ಕೃಷಿ ವಿಶ್ವವಿದ್ಯಾನಿಕಯದ ಸಮಾರಂಭದಲ್ಲಿ ಭಾಗವಹಿಸಿದ್ದ ಗಡ್ಕರಿ ರಾಷ್ಟ್ರಗೀತೆ ಹಾಡುವ ವೇಳೆ ಇತರೆ ಗಣ್ಯರೊಡನೆ ವೇದಿಕೆ ಮೇಲೆ ನಿಂತಿದ್ದಾಗ ಕುಸಿದು ಬಿದ್ದಿದ್ದಾರೆ.

ತೀವ್ರ ನಿತ್ರಾಣದಿಂದ ಕಣ್ಣಿಗೆ ಮಂಜು ಕವಿದಂತಾಗಿ ಅವರು ಕುಸಿದು ಬುದ್ದಾಗ ಪಕ್ಕದಲ್ಲಿದ್ದ ಭದ್ರತಾ ಸಿಬ್ಬಂದಿ ಅವರ ನೆರವಿಗೆ ಧಾವಿಸಿ ಉಪಚರಿಸಿದ್ದಾರೆ.

ಮಹಾರಾಷ್ಟ್ರ ಗವರ್ನರ್ ಸಿ. ವಿ. ರಾವ್ ಮತ್ತು ಇತರ ಗಣ್ಯರು ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ಗಡ್ಕರಿ ಮುಖ್ಯ ಅತಿಥಿಗಳಗಿದ್ದರು.

ದೇಹದಲ್ಲಿನ ಸಕ್ಕರೆ ಅಂಶ ಕಡಿಮೆಯಾಗಿದ್ದ ಕಾರಣ (ಲೋ ಶುಗರ್) ಅವರು ನಿತ್ರಾಣಗೊಂಡಿದ್ದಾರೆ ಎಂದು ಅವರ ಪರೀಕ್ಷೆ ನಡೆಸಿದ ವೈದ್ಯಕೀಯ ತಂಡ ಹೇಳಿದೆ.ಸಧ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

Nitin Gadkari,Ahmednagar, Maharashtra

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ