ಪ್ರೇಕ್ಷಕರ ಗ್ಯಾಲರಿಯಲ್ಲಿ ಅಡಿಲೇಡ್ ಟೆಸ್ಟ್ ವೀಕ್ಷಿಸಿದ ನಟಿ ಅನುಷ್ಕಾ ಶರ್ಮಾ

ಅಡಿಲೇಡ್: ವಿವಾಹ ವಾರ್ಷಿಕೋತ್ಸವ ಆಚರಣೆ ಇನ್ನು ಮೂರು ದಿನ ಬಾಕಿ ಇರುವಾಗಲೇ ಕ್ಯಾಪ್ಟನ್ ಕೊಹ್ಲಿ ಪತ್ನಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅಡಿಲೇಡ್‍ಗೆ ಆಗಮಿಸಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯ ವೀಕ್ಷಿಸಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ದಿನದಾಟದ ಪಂದ್ಯದ 67ನೇ ಓವರ್‍ನಲ್ಲಿ ವೇಗಿ ಇಶಾಂತ್ ಶರ್ಮಾ ಓವರ್‍ನಲ್ಲಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಪ್ರೇಕ್ಷಕ ಗ್ಯಾಲರಿಯಲ್ಲಿ ಕಂಡು ಬಂದರು. ಇದನ್ನ ಪ್ರೇಕ್ಷಕರು ತಮ್ಮ ಸೋಶಿಯಲ್ ಮೀಡಿಯದಲ್ಲಿ ಹಾಕಿಕೊಂಡಿದ್ದಾರೆ. ಈ ಬಾರಿಯ ಮೊದಲ ಮದುವೆ ವಾರ್ಷಿಕೋತ್ಸವನ್ನು ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಆಸ್ಟ್ರೇಲಿಯಾದಲ್ಲಿ ಆಚರಿಸಿಕೊಳ್ಳಲಿದ್ದಾರೆ.

ಕಳೆದ ವರ್ಷ ಡಿಸೆಂಬರ್‍ನಲ್ಲಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದೂರದ ಇಟಲಿಯಲ್ಲಿ ಮದುವೆಯಾಗಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ