ಡಿ.10ರಂದು ರೈತ ಸಂಘದಿಂದ ಬೆಳಗಾವಿಯ ಸುವಣಸೌಧದ ಮುಂದೆ ಹೋರಾಟ

ಬೆಂಗಳೂರು, ಡಿ.8- ಕಬ್ಬು ಬೆಳೆಗಾರರ ಸಮಸ್ಯೆ ಮತ್ತು ನೈಸ್ ಸಂಸ್ಥೆಯ ಭ್ರಷ್ಟಾಚಾರ ಕುರಿತಂತೆ ಡಿ.10ರಂದು ಬೆಳಗಾವಿಯ ಸುವರ್ಣಸೌಧದ ಮುಂದೆ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರು, ರಸ್ತೆಗೆ 5190 ಎಕರೆ ಟೌನ್‍ಶಿಪ್‍ಗೆ 5194ಎಕರೆ ಸೇರಿದಂತೆ ರಸ್ತೆ ನಿರ್ಮಾಣಕ್ಕಾಗಿ ಸರ್ಕಾರ ಒಟ್ಟಾರೆ 18313 ಎಕರೆ ಜಾಗ ಕೊಟ್ಟಿದೆ. ಆದರೆ ನೈಸ್ ಸಂಸ್ಥೆಯವರು 20193 ಎಕರೆ ಬಳಸಿಕೊಂಡು ರೈತರಿಗೆ ಅನ್ಯಾಯ ಮಾಡಿದೆ ಎಂದು ದೂರಿದರು.

ನೈಸ್ ಕಂಪೆನಿಯವರು ಅಕ್ರಮವಾಗಿ ವಶಪಡಿಸಿಕೊಳ್ಳಲು ಯತ್ನಿಸಿರುವ ಭೂಮಿಯ ಬಗ್ಗೆ ಸದನ ಸಮಿತಿ ವರದಿ ಮಾಡಿದೆ. ಈ ವರದಿಯನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮಾಡಬೇಕು ಎಂದು ಆಗ್ರಹಿಸಿದರು.

ರೈತರಿಗೆ ನ್ಯಾಯ ಒದಗಿಸಿಕೊಡುವ ಉದ್ದೇಶದಿಂದ ಅಧಿವೇಶನದ ವೇಳೆ ಹೋರಾಟ ನಡೆಸುತ್ತಿದ್ದೇವೆ ಎಂದು ಹೇಳಿದರು.
ಕರ್ನಾಟಕ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಪರಿಸರ ಸಂರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಜೆ.ಅಬ್ರಹಂ ಮತ್ತಿತರರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ