ಸರ್ಜಿಕಲ್ ಸ್ಟ್ರೈಕ್ ಸೇನಾ ದಾಳಿಯನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿರುವುದು ಸರಿಯಲ್ಲ: ನಿವೃತ್ತ ಸೇನಾಧಿಕಾರಿ ಡಿ.ಎಸ್.ಹೂಡಾ

ಚಂಡೀಗಢ: ಪಾಕ್ ಆಕ್ರಮಿತ ಕಾಶ್ಮೀರದ ಗಡಿಯಲ್ಲಿ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅತಿಯಾದ ಪ್ರಚಾರದ ಅಗತ್ಯವಿರಲಿಲ್ಲ ಎಂದು ನಿವೃತ್ತ ಸೇನಾಧಿಕಾರಿ ಡಿ.ಎಸ್.ಹೂಡಾ ಹೇಳಿದ್ದಾರೆ.

ಸೇನಾ ಸಾಹಿತ್ಯ ಉತ್ಸವ 2018ರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸೇನೆ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅತಿಯಾದ ಪ್ರಚಾರ ನಡೆಸಲಾಯಿತು ಎಂದು ನನಗೂ ಅನಿಸಿತ್ತು. ಸೇನಾ ಕಾರ್ಯಾಚರಣೆ ಅತ್ಯಂತ ಮುಖ್ಯವಾದದ್ದು. ಅದನ್ನು ನಾವು ಮಾಡಲೇಬೇಕು. ಅದನ್ನು ರಾಜಕೀಯ ಮಾಡುವ ಅಗತ್ಯವಿಲ್ಲ ಎಂದರು.

ರಾಜಕೀಯ ನಾಯಕರುಗಳು ಸೇನಾ ದಾಳಿಯನ್ನು ತಮ್ಮ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿರುವುದು ಸರಿಯಲ್ಲ. ಸಧ್ಯ ಗಡಿ ನಿಯಂತ್ರಣ ರೇಖೆ ಬಳಿ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿದರೆ, ನಾವು ಸಾಕಷ್ಟು ಚತುರತೆಯಿಂದಿರಬೇಕು. ಭಯೋತ್ಪಾದನೆ, ಗಡಿಯಲ್ಲಿ ಅತಿಕ್ರಮಣ ಪ್ರವೇಶಗಳ ವಿರುದ್ದ ಪಾಕಿಸ್ತಾನ ಸೂಕ್ತ ಕ್ರಮಗಳನ್ನು ಕೈಗೊಳ್ಳದೇ ಹೋದಲ್ಲಿ, ನಿರೀಕ್ಷಿಸಲು ಸಾಧ್ಯವಾಗದಷ್ಟು ದಾಳಿ, ಪ್ರತಿದಾಳಿಗಳು ನಡೆಯುತ್ತವೆ ಎಂದು ಹೇಳಿದರು.

“Too Much Hype Over Surgical Strike, Ex-Army Officer, Lieutenant General DS Hooda

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ