ಅಡಿಲೇಡ್: ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬಿಗಿ ಹಿಡಿತ ಸಾಧಿಸಿದೆ. ಮೂರನೇ ದಿನದಾಟದ ಪಂದ್ಯದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ದಿನದಾಟದ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 151 ರನ್ ಗಳಿಸಿದೆ. ಎರಡನೇ ಇನ್ನಿಂಗ್ಸ್ನಲ್ಲಿ ಆರಂಭಿಕ ಬ್ಯಾಟ್ಸ್ಮನ್ಗಳಾದ ಕನ್ನಡಿಗ ಕೆ.ಎಲ್. ರಾಹುಲ್ ಮತ್ತು ಮುರಳಿ ವಿಜಯ್ ಮೊದಲ ವಿಕೆಟ್ಗೆ 63 ರನ್ಗಳ ಉತ್ತಮ ಜೊತೆಯಾಟ ನೀಡಿದ್ರು. ರಾಹುಲ್ (44), ಮುರಳಿ ವಿಜಯ್ (18), ವಿರಾಟ್ ಕೊಹ್ಲಿ 34 ರನ್ಗಳಿಸಿ ದಿನದಾಟದ ಅಂತ್ಯದಲ್ಲಿ ಲಿಯಾನ್ಗೆ ವಿಕೆಟ್ ಒಪ್ಪಿಸಿದ್ರು. ಚೇತೇಶ್ವರ ಪೂಜಾರ ಅಜೇಯ 40, ಅಜಿಂಕ್ಯ ರಹಾನೆ ಅಜೇಯ 1 ರನ್ಗಳಿಸಿ ನಾಲ್ಕನೆ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದರೆ. ಇದಕ್ಕೂ ಮುನ್ನ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್ನಲ್ಲಿ 235 ರನ್ಗಳಿಗೆ ಆಲೌಟ್ ಆಯಿತು.