ಸಿದ್ಧಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದೆ: ಸುತ್ತೂರು ಶ್ರೀ

ಶಿವಮೊಗ್ಗ: ಸಿದ್ಧಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ. ಭಕ್ತರು ಅತಂಕಪಡುವ ಅವಶ್ಯಕತೆ ಇಲ್ಲ ಎಂದು ಸುತ್ತೂರು ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಸ್ವಾಮೀಜಿಗಳು, ಸಿದ್ಧಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಶ್ರೀಗಳು ಶೀಘ್ರದಲ್ಲಿ ಗುಣಮುಖರಾಗುತ್ತಾರೆ. ನಾನು ಚೆನ್ನೈನ ಆಸ್ಪತ್ರೆಯಲ್ಲಿ ಶ್ರೀಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದೇನೆ. ಅವರಿಗೆ ಸ್ವಲ್ಪ ವಿಶ್ರಾಂತಿಯ ಅವಶ್ಯಕತೆ ಇದೆ ಎಂದರು.

ಇದೇ ವೇಳೆ ಜನವರಿ ನಾಲ್ಕರಿಂದ ಒಂಬತ್ತನೆ ತಾರೀಖಿನ ತನಕ ನಡೆಯುವ ಸುತ್ತೂರು ಮಠದ ಹಿರಿಯ ಶ್ರೀಗಳ 1059 ನೇ ಜಯಂತಿ ಕಾರ್ಯಕ್ರಮಗಳು ನಡೆಯಲಿವೆ. ಶಿವಮೊಗ್ಗದ ಹಳೇ ಜೈಲು ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರೈತರ ಕುರಿತ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು ಎಂದರು.

ಶಿವಮೊಗ್ಗದಲ್ಲಿ ಮೈಸೂರು ಸುತ್ತೂರು ಮಠದ ಶಿವರಾತ್ರಿ ಶಿವಯೋಗಿಗಳ 1059 ನೇ ಜಯಂತಿ ಮಹೋತ್ಸವ ಕಾರ್ಯಕ್ರಮ ಜನವರಿ 4 ರಿಂದ 10 ತನಕ ನಡೆಯಲಿದೆ. ಈ ಕಾರ್ಯಕ್ರಮ ನಗರದ ಹಳೇ ಕಾರಾಗೃಹ ಮೈದಾನದಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಇಂದು ಸಭಾ ಮಂಟಪದ ಭೂಮಿ ಪೂಜೆ ನಡೆಸಲಾಯಿತು.

Siddaganga sri,getting cure, Sutturu sri

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ